For Quick Alerts
  ALLOW NOTIFICATIONS  
  For Daily Alerts

  ಬೆಂಗಳೂರಿಗೆ ಬರ್ತಿದ್ದಾರೆ ಬಾಲಿವುಡ್ 'ದಬಾಂಗ್' ಚುಲ್ ಬುಲ್ ಪಾಂಡೆ

  |

  ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಸದ್ಯ 'ದಬಾಂಗ್-3' ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಲ್ಮಾನ್ ಖಾನ್ ಸಿನಿಮಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ದಬಾಂಗ್-3 ಪ್ರಮೋಷನ್ ನಲ್ಲಿ ನಿರತರಾಗಿದ್ದಾರೆ. ಈ ಇಬ್ಬರು ಸ್ಟಾರ್ ನಟರು ಒಟ್ಟಿಗೆ ಕಾಣಿಸಿಕೊಂಡಿರುವ ದಬಾಂಗ್-3 ಸಿನಿಮಾ ಇದೆ ತಿಂಗಳು 20ಕ್ಕೆ ತೆರೆಗೆ ಬರುತ್ತಿದೆ.

  ವಿಶೇಷ ಅಂದರೆ ಸಿನಿಮಾ ರಿಲೀಸ್ ಗೂ ಮೊದಲ ಸಲ್ಮಾನ್ ಖಾನ್ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿದೆ. ಹೌದು, ಚಿತ್ರದ ಪ್ರಮೋಷನ್ ಗಾಗಿ ಸಲ್ಮಾನ್ ಖಾನ್ ಬೆಂಗಳೂರಿಗೆ ಬರ್ತಿದ್ದಾರೆ. ಇದೇ ತಿಂಗಳು 17ಕ್ಕೆ ದಬಾಂಗ್-3 ಚಿತ್ರತಂಡ ಬೆಂಗಳೂರನಲ್ಲಿ ಇರಲಿದೆ. ಇಡೀ ಟೀಂ ಜೊತೆ ಅಭಿನಯ ಚಕ್ರವರ್ತಿ ಕೂಡ ಸೇರಿಕೊಳ್ಳಲಿದ್ದಾರೆ.

  ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ಜೊತೆ ಸಲ್ಮಾನ್ ಖಾನ್!ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ಜೊತೆ ಸಲ್ಮಾನ್ ಖಾನ್!

  ಇತ್ತೀಚಿಗಷ್ಟೆ ಸಲ್ಮಾನ್ ಖಾನ್, ಸುದೀಪ್ ನಡೆಸಿಕೊಡುವ ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-7ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ವಿಡಿಯೋ ಮೂಲಕ ಸಲ್ಮಾನ್ ಖಾನ್ ಮತ್ತು ಸೋನಾಕ್ಷಿ ಸಿನ್ಹಾ ಕನ್ನಡ ಪ್ರೇಕ್ಷಕರ ಮುಂದೆ ಬಂದಿದ್ದರು.ಆದರೀಗ ನೇರವಾಗಿ ಬೆಂಗಳೂರಿಗೆ ಬರಲು ಸಜ್ಜಾಗಿದೆ ದಬಾಂಗ್-3 ಚಿತ್ರತಂಡ.

  ದಬಾಂಗ್-3 ಹಿಂದಿ ಮತ್ತು ದಕ್ಷಿಣ ಭಾರತೀಯ ಭಾಷೆಗಳ ಜೊತೆಗೆ ಕನ್ನಡದಲ್ಲೂ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಚಿತ್ರದ ಹಾಡುಗಳಿಗೆ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ಬರೆದಿದ್ದಾರೆ. ದಬಾಂಗ್-3 ನಿರ್ದೇಶಕ ಪ್ರಭುದೇವ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ. ಭಾರಿ ನಿರೀಕ್ಷೆ ಮೂಡಿಸಿರುವ ಚುಲ್ ಬುಲ್ ಪಾಂಡೆ ಮತ್ತು ಬಾಲಿ ಸಿಂಗ್ ಕಾದಾಟ ನೋಡಲು 20ರ ವರೆಗೂ ಕಾಯಲೆ ಬೇಕು.

  English summary
  Bollywood famous Actor Salman Khan will come to Bangalore for most expected dabangg-3 promotion.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X