ಶಾರುಖ್ ಖಾನ್‌ಗಾಗಿ ಕೋಟಿ ಕೋಟಿ ಸಂಭಾವನೆ ಬಿಟ್ಟುಕೊಟ್ಟ ಸಲ್ಮಾನ್ ಖಾನ್

ಶಾರುಖ್ ಖಾನ್ ಸದ್ಯ ಪಠಾಣ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 4 ವರ್ಷಗಳ ಬಳಿಕ ಶಾರುಖ್ ಬಣ್ಣ ಹಚ್ಚುತ್ತಿದ್ದು, ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟಾಗಿದೆ.

ಝೀರೋ ಸಿನಿಮಾ ಬಳಿಕ ಶಾರುಖ್ ಮತ್ತೆ ತೆರೆಮೇಲೆ ಕಾಣಿಸಿಕೊಂಡಿರಲಿಲ್ಲ. ಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್ ಸಿನಿಮಾ ಮಾಡುವುದನ್ನೇ ನಿಲ್ಲಿಸಿದ್ದರು. ವರ್ಷಗಳ ಬಳಿಕ ಚಿತ್ರೀಕರಣದಲ್ಲಿ ನಿರತರಾಗಿದ್ದು, ವಿಭಿನ್ನ ಲುಕ್ ನಲ್ಲಿ, ಹೊಸತನದ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗುತ್ತಿದ್ದಾರೆ.

ವಿಶೇಷ ಎಂದರೆ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಟೈಗರ್ ಎನ್ನುವ ಪಾತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಇಬ್ಬರು ಒಟ್ಟಿಗೆ ತೆರೆಮೇಲೆ ರಾರಾಜಿಸಲಿದ್ದಾರೆ ಎನ್ನುವ ಸುದ್ದಿ ಕೇಳಿಯೇ ಥ್ರಿಲ್ ಆಗಿರುವ ಅಭಿಮಾನಿಗಳು ಇನ್ನು ಇನ್ನು ಒಟ್ಟಿಗೆ ಕಾಣಿಸಿಕೊಳ್ಳವುದನ್ನು ನೋಡಲು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ.

 Salman khan works free for Shah Rukh Khans Pathan movie

ಅದೇನೆ ಇರಲಿ ಇದೀಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಸಲ್ಮಾನ್ ಖಾನ್, ಶಾರುಖ್ ಖಾನ್‌ಗಾಗಿ ಯಾವುದೇ ಸಂಭಾವನೆ ಪಡೆಯದೆ ಸಿನಿಮಾದಲ್ಲಿ ನಟಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 10 ದಿನಗಳು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಸಲ್ಮಾನ್ ಖಾನ್ ನಿರ್ಮಾಪಕರಿಂದ ಯಾವುದೇ ಹಣ ತೆಗೆದುಕೊಳ್ಳಲಿಲ್ಲವಂತೆ. ಕೋಟಿ ಕೋಟಿ ಸಂಭಾವನೆ ಪಡೆಯುವ ಸಲ್ಮಾನ್, ಶಾರುಖ್‌ಗಾಗಿ ಸಂಭಾವನೆ ಪಡೆಯದೆ ನಟಿಸಿರುವುದು ಅಚ್ಚರಿ ಮೂಡಿಸಿದೆ.

ಮೂಲಗಳ ಪ್ರಕಾರ ನಿರ್ಮಾಪಕ ಆದಿತ್ಯ ಚೋಪ್ರಾ ಸಂಭಾವನೆ ಬಗ್ಗೆ ಮಾತನಾಡಿದಾಗ ಸಲ್ಮಾನ್ ಖಾನ್, 'ಶಾರುಖ್ ಖಾನ್ ನನ್ನ ಸಹೋದರನ ಹಾಗೆ. ಆತನಿಗಾಗಿ ನಾನು ಏನು ಬೇಕಾದರೂ ಮಾಡುತ್ತೇನೆ' ಎಂದು ಹೇಳಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಹಾಗಾಗಿ ಸಲ್ಮಾನ್ ಖಾನ್‌ಗೆ ಸಂಭಾವನೆ ಬದಲಿಗೆ ದುಬಾರಿ ಉಡುಗೊರೆ ನೀಡಲು ಚಿತ್ರತಂಡ ಬಯಸಿದೆ ಎನ್ನುವ ಮಾತು ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.

ಸದ್ಯ ಹೆಚ್ಚುತ್ತಿರುವ ಕೊರೊನಾದಿಂದ ಚಿತ್ರೀಕರಣ ಸ್ಥಗಿತ ಮಾಡಲಾಗಿದೆ. ಸಿನಿಮಾದ ಬಿಡುಗಡೆ ದಿನಾಂಕ ಕೂಡ ಮತ್ತೆ ಮುಂದಕ್ಕೆ ಹೋಗಿದ್ದು, ಸಿನಿಮಂದಿಯ ಲೆಕ್ಕಾಚಾರ ತಲೆಕೆಳಗಾಗಿದೆ. ಹಾಗಾಗಿ ಶಾರುಖ್ ಖಾನ್ ಪಠಾಣ್ ಸಿನಿಮಾ ಯಾವಾಗ ತೆರೆಮೇಲೆ ಬರಲಿದೆ ಎನ್ನುವುದು ಸದ್ಯದ ಕುತೂಹಲ.

More from Filmibeat

English summary
Salman khan works free for Shah Rukh Khan's next Pathan movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X