ಸಾನಿಯಾ ಮಿರ್ಜಾ ಜೊತೆ ವಿಚ್ಛೇದನ ವದಂತಿ: ನಟಿಯನ್ನು ಮದುವೆಯಾದ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್!

ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ದಾಂಪತ್ಯದಲ್ಲಿ ಎಲ್ಲವು ಸರಿಯಿಲ್ಲ ಎಂಬ ವದಂತಿಗಳ ನಡುವೆಯೇ ಬ್ರೇಕಿಂಗ್ ನ್ಯೂಸ್ ಹೊರಬಂದಿದೆ. ಪಾಕಿಸ್ತಾನದ ಹಿರಿಯ ಕ್ರಿಕೆಟಿಗ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಕತ್ ವೈರಲ್ ಆಗುತ್ತಿವೆ.

ಇತ್ತೀಚೆಗಷ್ಟೇ ಭಾರತದ ಪ್ರಖ್ಯಾತ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ವಿಚ್ಛೇಧನ ಪಡೆಯುತ್ತಿದ್ದಾರೆ ಎಂಬ ವರದಿಗಳು ಹರಡಿದ್ದವು. ಅದು ವದಂತಿಯೇ ಸತ್ಯವೇ ಎಂದು ತಿಳಿಯುವ ಮೊದಲೇ ಅವರ ಪತಿ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗಿದ್ದಾರೆ. ಅವರೇ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

Sania Mirza Husband Shoaib Malik Marries To Pakistani Actress Amid Divorce Rumours

ಸಾನಿಯಾ ಸಂಸಾರದಲ್ಲಿ ಬಿರುಕು: ಎರಡನೇ ಮದುವೆಯಾದ ಶೋಯೆಬ್

ಪಾಕಿಸ್ತಾನದ ಹಿರಿಯ ಕ್ರಿಕೆಟಿಗ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ಗೆ ಹಲವು ಮಂದಿ ಶುಭ ಹಾರೈಸಿದರೇ, ಮತ್ತೆ ಕೆಲವರು ಸಾನಿಯಾ ಮಿರ್ಜಾ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

ವೈರಲ್ ಫೋಟೋಗಳಲ್ಲಿ, ಅವರು ನಿಕಾಹ್ ಸಮಾರಂಭದಲ್ಲಿ ಮದುವೆಯಾದ ನಂತರ ಸನಾ ಜಾವೇದ್ ಅವರೊಂದಿಗೆ ಪೋಸ್ ನೀಡಿರುವುದನ್ನು ಕಾಣಬಹುದು. ಈ ಪಾಕಿಸ್ತಾನಿ ಜೋಡಿ ತಮ್ಮ ಮದುವೆಯ ವಿವರಗಳನ್ನು ಮುಚ್ಚಿಟ್ಟಿದ್ದಾರೆ. ಸಾನಿಯಾ ಮಿರ್ಜಾ ಅವರೊಂದಿಗಿನ ಸಂಬಂಧದ ಬಗ್ಗೆ ಈ ರೀತಿ ಉತ್ತರಿಸಿದ್ದಾರೆ.

ನವವಿವಾಹಿತರು ಕ್ಯಾಮೆರಾಗೆ ಪೋಸ್ ನೀಡುವಾಗ ಸಕತ್ ಖುಷಿಯಾಗಿದ್ದಾರೆ. ಇನ್ನು, ಕ್ರಿಕೆಟಿಗ ಶೋಯೆಬ್ ಮಲಿಕ್ ಮತ್ತು ನಟಿ ಸನಾ ಜಾವೇದ್ ಪರಸ್ಪರ ಡೇಟಿಂಗ್ ಮಾಡುವುದನ್ನು ಅಧಿಕೃತವಾಗಿ ದೃಢೀಕರಿಸಿರಲಿಲ್ಲ. ಅವರ ಸಂಬಂಧದ ಬಗ್ಗೆ ಎಲ್ಲಿಯೂ ಸುಳಿವು ನೀಡಿರಲಿಲ್ಲ. ಇದೇ ಕಾರಣಕ್ಕೆ ನೆಟಿಜನ್‌ಗಳು ಆಶ್ಚರ್ಯಚಕಿತರಾಗಿದ್ದಾರೆ.

Sania Mirza Husband Shoaib Malik Marries To Pakistani Actress Amid Divorce Rumours

ಕಳೆದ ಬುಧವಾರದಂದು, ಸಾನಿಯಾ ಮಿರ್ಜಾ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಕ್ಲಿಷ್ಠಕರವಾದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಅದು ಪಾಕಿಸ್ತಾನದ ಕ್ರಿಕೆಟಿಗನ ಜೊತೆಗೆ ವಿಚ್ಛೇದನದ ಊಹಾಪೋಹಗಳಿಗೆ ಪುಷ್ಠ ನೀಡಿತ್ತು. ಅವರ ಪೋಸ್ಟ್ ಹೀಗಿದೆ, "ಮದುವೆ ಕಷ್ಟ. ವಿಚ್ಛೇದನ ಕಷ್ಟ. ನಿಮಗೆ ಯಾವುದು ಬೇಕೋ ಆರಿಸಿ. ಬೊಜ್ಜು ಕಷ್ಟ. ಫಿಟ್ ಆಗಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸಾಲದಲ್ಲಿ ಇರುವುದು ಕಷ್ಟ. ಆರ್ಥಿಕವಾಗಿ ಶಿಸ್ತುಬದ್ಧವಾಗಿರುವುದು ಕಷ್ಟ. ನಿಮಗೆ ಯಾವ ಕಷ್ಟ ಬೇಕೋ ಆರಿಸಿ. ಸಂವಹನ ಕಷ್ಟ. ಸಂವಹನ ಮಾಡದಿರುವುದು ಕಷ್ಟ. ನಿಮ್ಮ ಕಷ್ಟ ನೀವೇ ಆರಿಸಿ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ಅದು ಯಾವಾಗಲೂ ಕಠಿಣವಾಗಿರುತ್ತದೆ. ಆದರೆ ನಾವು ನಮ್ಮ ಕಷ್ಟವನ್ನು ಆಯ್ಕೆ ಮಾಡಬಹುದು. ಬುದ್ಧಿವಂತಿಕೆಯಿಂದ ಆರಿಸಿ" ಎಂದು ಹೇಳಿದ್ದರು.

ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್

ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕ್ ಕ್ರಿಕೆಟಿಗ ಶೋಯೆಬ್ ಮಲಿಕ್ ಏಪ್ರಿಲ್ 12, 2010 ರಂದು ಸಾಂಪ್ರದಾಯಿಕ ಹೈದರಾಬಾದಿ ಮುಸ್ಲಿಂ ವಿವಾಹ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಪಾಕಿಸ್ತಾನಿ ವಿವಾಹದ ವಿಧಿವಿಧಾನಗಳನ್ನು ಮಾಡಲಾಗಿತ್ತು. ಇವರಿಗೆ 2018 ರಲ್ಲಿ ಮಗುವಿಗೆ ಪೋಷಕರಾಗಿದ್ದಾರೆ. ಮಗುವಿಗೆ ಇಝಾನ್ ಮಿರ್ಜಾ ಮಲಿಕ್ ಎಂದು ಹೆಸರಿಡಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿತ್ತು.

More from Filmibeat

English summary
Shoaib Malik marries Pakistani actress Sana Javed amid divorce rumours.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X