For Quick Alerts
  ALLOW NOTIFICATIONS  
  For Daily Alerts

  ಹಿರಿಯ ನಟ ನಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು

  |

  ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.

  "ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.

  ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

  ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.

  ಪ್ರಭಾಸ್ ಹೇರ್ ಸ್ಟೈಲ್ ಗೆ ಲಕ್ಷ ಗಟ್ಟಲೆ ಖರ್ಚು ಮಾಡಿದ| Filmibeat Kannada

  ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.

  English summary
  Bollywood Senior Actor Naseeruddin shah admitted to hospital.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X