ಬಾಲಿವುಡ್ ಸ್ಟಾರ್ ನಟರಿಗೆ ಶಾಕ್: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್!
ಹಿಂದಿ ಸಿನಿಮಾರಂಗದ ಟಾಪ್ ನಟರಲ್ಲಿ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಪ್ರಮುಖರು. ಸಿನಿಮಾಗಳ ಜೊತೆ ಜೊತೆಗೆ ಹಲವು ಜಾಹೀರಾತಿಗಳಲ್ಲಿಯೂ ಈ ನಟರು ಕಾಣಿಸಿಕೊಳ್ಳುತ್ತಾರೆ. ದೊಡ್ಡ ದೊಡ್ಡ ಬ್ರಾಂಡ್‌ಗಳಿಗೆ ಕೆಲಸ ಮಾಡುವ ಇವರಿಗೆ ಸದ್ಯ ನ್ಯಾಯಾಲಯ ನೋಟಿಸ್ ನೀಡಿದೆ.
ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಮೂವರು ಒಂದೇ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು, ಅಲಹಾಬಾದ್ ನ್ಯಾಯಾಲಯವು ಗುಟ್ಕಾ ಕಂಪನಿಗಳಿಗೆ ಮತ್ತು ಅವರು ಮಾಡುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ನಟರಿಗೆ ನೋಟಿಸ್ ನೀಡಿದೆ. ನಟರು ಗುಟ್ಕಾ ಪ್ರಮೋಟ್ ಮಾಡುತ್ತಿದ್ದಾರೆ ಎಂದು ಜನರು ಕೂಡ ಈ ಹಿಂದೆ ಕಿಡಿಕಾರಿದ್ದರು.

ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್‌ಗೆ ನೋಟಿಸ್
ವರದಿಗಳ ಪ್ರಕಾರ, ತಂಬಾಕು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಸೆಲೆಬ್ರಿಟಿಗಳ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 20 ರಂದು ತಂಬಾಕು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿರುವ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ಜಾರಿ ಮಾಡಿದೆ ಎಂದು ಅಲಹಾಬಾದ್ ಕೋರ್ಟ್‌ನ ಲಕ್ನೋ ಪೀಠಕ್ಕೆ ಡೆಪ್ಯೂಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ತಿಳಿಸಿದ್ದಾರೆ.
ಹೀಗಾಗಿ ಈ ವಿಷಯದ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆ ನಡೆಯುತ್ತಿರುವುದರಿಂದ ಅಲಹಾಬಾದ್ ಕೋರ್ಟ್‌ನ ಲಕ್ನೋ ಪೀಠಕ್ಕೆ ಸಲ್ಲಿಸಲಾಗಿರುವ ಹೊಸ ಅರ್ಜಿಯನ್ನು ವಜಾಗೊಳಿಸಿ. ಈ ವಿಷಯದ ಮುಂದಿನ ವಿಚಾರಣೆಯನ್ನು ಮೇ 9, 2024 ಕ್ಕೆ ನಿಗದಿಪಡಿಸಲಾಗಿದೆ.
ನ್ಯಾಯಾಲಯಕ್ಕೆ ಸಲ್ಲಿಸಲಾದ ಅರ್ಜಿಯಲ್ಲಿ ಏನಿತ್ತು...?
ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯುಂಟುಮಾಡುವ ಕೆಲವು ಉತ್ಪನ್ನಗಳು ಅಥವಾ ವಸ್ತುಗಳ ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು, ವಿಶೇಷವಾಗಿ 'ಪದ್ಮ ಪ್ರಶಸ್ತಿ ಪುರಸ್ಕೃತರು' ಭಾಗವಹಿಸುವುದರ ವಿರುದ್ಧ ಕಳವಳ ವ್ಯಕ್ತಪಡಿಸಿ ವಕೀಲ ಮೋತಿಲಾಲ್ ಯಾದವ್ ಅವರು ಅಲಹಾಬಾದ್ ಕೋರ್ಟ್‌ನ ಲಕ್ನೋ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಇಲ್ಲಿ ಗಮನಿಸಬೇಕಾದ ವಿಷಯವೆಂದರೇ, ಆಗಸ್ಟ್ 2023 ರಲ್ಲಿ ಈ ಬಗ್ಗೆ ನ್ಯಾಯಾಲಯವು ಕ್ಯಾಬಿನೆಟ್ ಕಾರ್ಯದರ್ಶಿ, ಮುಖ್ಯ ಆಯುಕ್ತರು ಮತ್ತು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ನೀಡಿತ್ತು. ಜೊತೆಗೆ ತನ್ನ ಸೆಪ್ಟೆಂಬರ್ 2022 ರ ಆದೇಶವನ್ನು ಅನುಸರಿಸದಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.
ಪ್ರಕರಣ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಸಂಪರ್ಕಿಸಲು ಅರ್ಜಿದಾರರನ್ನು ಕೇಳಿದೆ. ಈ ಕುರಿತು ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ನೇತೃತ್ವದ ಪೀಠಕ್ಕೆ ಉಪ ಸಾಲಿಸಿಟರ್ ಜನರಲ್ ಅವರು ಅಕ್ಟೋಬರ್ 20 ರಂದು ನಟರಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ವಿಷಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ, ಶುಕ್ರವಾರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅವರು ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ಕೇಂದ್ರವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.


Click it and Unblock the Notifications











