For Quick Alerts
  ALLOW NOTIFICATIONS  
  For Daily Alerts

  ಶಾರುಖ್ ಖಾನ್ ಜೊತೆ ಚಿತ್ರೀಕರಣ ಪ್ರಾರಂಭ ಮಾಡಿದ ನಟಿ ನಯನತಾರಾ

  By ಫಿಲ್ಮಿಬೀಟ್ ಡೆಸ್ಕ್
  |

  ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅನೇಕ ವರ್ಷಗಳ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಸದ್ಯ ಪಠಾಣ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಈ ನಡುವೆ ಈಗ ಮತ್ತೊಂದು ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಆಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಶಾರುಖ್ ಬ್ಯುಸಿಯಾಗಿದ್ದಾರೆ. ಇಂದಿನಿಂದ (ಸೆಪ್ಟಂಬರ್ 3) ಅಟ್ಲೀ ನಿರ್ದೇಶನದ ಹೊಸ ಸಿನಿಮಾ ಪ್ರಾರಂಭವಾಗಿದ್ದು, ಶಾರುಖ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

  ಸದ್ಯ ಚಿತ್ರೀಕರಣ ಪುಣೆಯಲ್ಲಿ ನಡೆಯುತ್ತಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಚಿತ್ರದಲ್ಲಿ ಶಾರುಖ್‌ಗೆ ಜೋಡಿಯಾಗಿ ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ನಯನತಾರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ನಯನತಾರಾ ಕೂಡ ಪುಣೆ ತಲುಪಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

  ವಿಘ್ನೇಶ್ ಜೊತೆಗಿನ ನಿಶ್ಚಿತಾರ್ಥದ ಗುಟ್ಟು ರಟ್ಟು ಮಾಡಿದ ನಯನತಾರ ವಿಘ್ನೇಶ್ ಜೊತೆಗಿನ ನಿಶ್ಚಿತಾರ್ಥದ ಗುಟ್ಟು ರಟ್ಟು ಮಾಡಿದ ನಯನತಾರ

  ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಅಟ್ಲೀ ಮೊದಲ ಬಾರಿಗೆ ಬಾಲಿವುಡ್ ಸ್ಟಾರ್, ಕಿಂಗ್ ಖಾನ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಟ್ಲೀ ಮತ್ತು ಶಾರುಖ್ ಸಿನಿಮಾ ಮಾಡ್ತಾರೆ ಎನ್ನುವ ಸುದ್ದಿ ಅನೇಕ ತಿಂಗಳಿಂದ ಸದ್ದು ಮಾಡುತ್ತಿತ್ತು. ಕೊನೆಗೂ ಚಿತ್ರೀಕರಣ ಪ್ರಾರಂಭವಾಗಿದೆ. ಅಂದಹಾಗೆ ಹೊಸ ಸಿನಿಮಾದ ಬಗ್ಗೆ ಶಾರುಖ್, ಅಟ್ಲೀ ಅಥವಾ ನಯನತಾರಾ ಯಾರು ಈ ಬಗ್ಗೆ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ. ಆದರೆ ಇಂದಿನದಿಂದ ಚಿತ್ರೀಕರಣ ಪ್ರಾರಂಭವಾಗಿರುವ ವಿಚಾರ ವೈರಲ್ ಆಗಿದೆ.

  ಟ್ವಿಟ್ಟರ್‌ನಲ್ಲಿ ಅಟ್ಲೀ ಟ್ರೆಂಡಿಂಗ್‌ನಲ್ಲಿದ್ದು, ಶಾರುಖ್ ಮತ್ತು ನಯನತಾರಾ ಫೋಟೋಗಳನ್ನು ಶೇರ್ ಮಾಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅಂದಹಾಗೆ ಇನ್ನು ಹೆಸರಿಡದ ಈ ಸಿನಿಮಾದಲ್ಲಿ ಶಾರುಖ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ರಿವೀಲ್ ಆಗಿದೆ. ತಂದೆ ಮತ್ತು ಮಗನ ಪಾತ್ರದಲ್ಲಿ ಶಾರುಖ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ನಯನತಾರಾ ಈಗಾಗಲೇ ಅಟ್ಲೀ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜ ರಾಣಿ ಮತ್ತು ಬಿಗಿಲ್ ಸಿನಿಮಾಗಳಲ್ಲಿ ನಯನತಾರಾ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

  ನಯನತಾರಾ ಸದ್ಯ ತಮಿಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಇತ್ತೀಗಷ್ಟೆ ನಯನತಾರಾ ಮತ್ತು ಸಮಂತಾ ಇಬ್ಬರು ಚಲಿಸುತ್ತಿರುವ ಬಸ್ ನ ಫುಟ್ ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಚಿತ್ರಕ್ಕೆ ನಯನತಾರಾ ಬಾಯ್ ಫ್ರೆಂಡ್ ವಿಘ್ನೇಶ್ ಶಿವನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ತಮಿಳು ಸಿನಿಮಾ ಜೊತೆಗೆ ಇದೀಗ ಬಾಲಿವುಡ್ ಸಿನಿಮಾದ ಚಿತ್ರೀಕರಣ ಸಹ ಪ್ರಾರಂಭ ಮಾಡಿದ್ದಾರೆ.

  ಇನ್ನು ಶಾರುಖ್ ಖಾನ್ ಸದ್ಯ ಪಠಾಣ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಸಿದ್ದಾರೆ. ಕೊರೊನಾ ಹಾವಳಿಯ ನಡುವೆಯೂ ಶಾರುಖ್ ಸಾಕಷ್ಟು ಮುಗಿಸಿದ್ದಾರೆ. ಇದೀಗ ಅಟ್ಲೀ ಜೊತೆ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಈ ಸಿನಿಮಾ ಜೊತೆಗೆ ಶಾರುಖ್ ಬಳಿ ಇನ್ನು ಎರಡು ಸಿನಿಮಾಗಳಿವೆ. ಆದರೆ ಯಾವ ಸಿನಿಮಾದ ಬಗ್ಗೆಯೂ ಶಾರುಖ್ ಅಧಿಕೃತವಾಗಿ ಏನು ಹೇಳಿಕೊಂಡಿಲ್ಲ. ಸದ್ಯದಲ್ಲೇ ಶಾರುಖ್ ಪಠಾಣ್ ಮೂಲಕ ಅಭಿಮಾನಿಗಳ ಮುಂದೆ ಬರುವ ಸಾಧ್ಯತೆ ಇದೆ.

  ಅಂದಹಾಗೆ ಶಾರುಖ್ ಕೊನೆಯದಾಗಿ ಜೀರೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬ್ಯಾಕ್ ಟು ಬ್ಯಾಕ್ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್ ಜೀರೋ ಸಿನಿಮಾದ ಸೋಲಿನ ಬಳಿಕ ಬಣ್ಣ ಹಚ್ಚುವುದನ್ನೇ ನಿಲ್ಲಿಸಿದ್ದರು. ಇದೀಗ ಮೂರು ವರ್ಷಗಳ ಬಳಿಕ ಶಾರುಖ್ ಮತ್ತೆ ಬಣ್ಣ ಹಚ್ಚಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ನಿರತರಾಗಿದ್ದಾರೆ. ಶಾರುಖ್ ನನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

  English summary
  Bollywood Actor Shah Rukh khan And Nayanthara start shooting for Atlee's next movie in Pune.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X