ಸಲಾರ್ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಶಾರುಖ್ ಖಾನ್ ನಟನೆಯ ಡಂಕಿ ಟ್ರೈಲರ್ ಎಂಟ್ರಿಗೆ ಡೇಟ್ ಫಿಕ್ಸ್!
ಈ ಡಿಸೆಂಬರ್ ಪ್ರಭಾಸ್ ನಟನೆಯ 'ಸಲಾರ್' ಮತ್ತು ಶಾರುಖ್ ಖಾನ್ ಅಭಿನಯದ 'ಡಂಕಿ' ಸಿನಿಮಾಗಳ ಪೈಪೋಟಿಗೆ ಸಾಕ್ಷಿಯಾಗಲಿದೆ. ಈಗಾಗಲೇ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಇರದ ಬೆನ್ನಲ್ಲೇ ರಾಜ್ ಕುಮಾರ್ ಹಿರಾನಿ ನಿರ್ದೇಶನದ 'ಡಂಕಿ' ಟ್ರೈಲರ್ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ.
ಇದೇ ಮೊದಲ ಬಾರಿಗೆ ನಟ ಶಾರುಖ್ ಖಾನ್ ಹಾಗೂ ನಿರ್ದೇಶಕ ರಾಜ್ ಕುಮಾರ್ ಹಿರಾನಿ 'ಡಂಕಿ' ಸಿನಿಮಾಗಾಗಿ ಒಂದಾಗಿದ್ದಾರೆ. ಈಗಾಗಲೇ ಡಂಕಿ ಡ್ರಾಪ್ 1, 2, 3 ಎಂದು ಹಾಡುಗಳು ರಿಲೀಸ್ ಆಗಿದ್ದು, ಈಗ ಡಂಕಿ ಡ್ರಾಪ್ 4 ಟೈಟಲ್ ಅಡಿಯಲ್ಲಿ ಮಂಗಳವಾರ (ಡಿಸೆಂಬರ್ 5) ಟ್ರೇಲರ್ ಬಿಡುಗಡೆಯಾಗಲಿದೆ.

ಡಿಸೆಂಬರ್ 5ಕ್ಕೆ 'ಡಂಕಿ' ಡ್ರಾಪ್ 4 ರಿಲೀಸ್
ಈ ವರ್ಷ ಬ್ಯಾಕ್ ಟು ಬ್ಯಾಕ್ ಮಾಸ್ ಸಿನಿಮಾಗಳ ಮೂಲಕ ಗೆಲುವು ಕಂಡಿರುವ ಶಾರುಖ್ ಖಾನ್ ಕ್ಲಾಸ್ ಸಿನಿಮಾ 'ಡಂಕಿ' ಮೂಲಕ ಪ್ರೇಕ್ಷಕರ ಎದುರು ಹಾಜರಾಗುತ್ತಿದ್ದಾರೆ. ಮೊದಲ ಬಾರಿಗೆ ರಾಜ್ ಕುಮಾರ್ ಹಿರಾನಿ ಜೊತೆ ಬಾಲಿವುಡ್ ಬಾಸ್‌ಷಾ ಕೈ ಜೋಡಿಸಿದ್ದು, ಇಬ್ಬರ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸಲಾರ್ ಟ್ರೈಲರ್ ಬಿಡುಗಡೆಯಾದ ನಂತರ ಡಂಕಿ ಟ್ರೇಲರ್ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಎದುರುರಾಗಿತ್ತು. ಅದಕ್ಕೆ ಡಿಸೆಂಬರ್ 5ಕ್ಕೆ ಉತ್ತರ ಸಿಗಲಿದೆ.
ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ 'ಡಂಕಿ'ಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ ಖಾನ್ , ಮನು ಪಾತ್ರದಲ್ಲಿ ತಾಪ್ಸಿ ಪನ್ನು, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ನಟ ವಿಕ್ಕಿ ಕೌಶಲ್, ಅನಿಲ್ ಗ್ರೋವರ್ ಹೀಗೆ ಹೆಸರಾಂತ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಡಂಕಿ ಟ್ರೈಲರ್‌ನಲ್ಲಿ ಏನಿರಲಿದೆ..?
ಮೂಲಗಳ ಪ್ರಕಾರ, ಡಂಕಿ ಡ್ರಾಪ್ 4 ಸಿನಿಮಾದ ಕಥಾವಸ್ತುವಿನ ನೋಟವನ್ನು ನೀಡುತ್ತದೆ. ಮೂಲವು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, "ಪ್ರೇಕ್ಷಕರು ಈ ವರ್ಷವನ್ನು ಅತ್ಯಂತ ಪ್ರೀತಿಯ ಸಿನಿಮಾಗಳೊಂದಿಗೆ ಕೊನೆಗೊಳಿಸಲಿರುವ ಕಾರಣ, ಕುಟುಂಬಗಳು ಒಟ್ಟಿಗೆ ಸೇರಲು ಮತ್ತು ಒಟ್ಟು ಕುಟುಂಬದೊಂದಿಗೆ ಆನಂದಿಸಲು ಈ ಸಿನಿಮಾ ಪರಿಪೂರ್ಣ ಮನರಂಜನೆ" ಎಂದು ತಿಳಿಸಿದೆ.
ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಾಕ್ಕೆ ಹೋಗುವ ಜನರ ಕಥೆಯನ್ನೆ ರಾಜಕುಮಾರ್ ಹಿರಾನಿ 'ಡಂಕಿ' ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.
ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್ 22 ರಂದು ಸಿನಿಮಾ ರಿಲೀಸ್ ಆಗಲಿದೆ. ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.


Click it and Unblock the Notifications











