For Quick Alerts
  ALLOW NOTIFICATIONS  
  For Daily Alerts

  2 ವರ್ಷದ ಬಳಿಕ ಚಿತ್ರೀಕರಣಕ್ಕೆ ಮರಳಿದ ಬಾಲಿವುಡ್ ನಟ ಶಾರುಖ್ ಖಾನ್

  |

  ಎರಡು ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದ ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಶಾರುಖ್ ಬಳಿ ಸದ್ಯ 4 ಸಿನಿಮಾಗಳಿವೆ ಎಂದು ಹೇಳಲಾಗುತ್ತಿದೆ. ಇದೀಗ ಕಿಂಗ್ ಖಾನ್, ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ.

  ಕಳೆದ ಮೂರು ತಿಂಗಳಿಂದ ಐಪಿಎಲ್ ನಲ್ಲಿ ಬ್ಯುಸಿ ಇದ್ದ ಶಾರುಖ್ ಇದೀಗ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಇಂದು ನವೆಂಬರ್ 18ರಿಂದ ಪಠಾಣ್ ಸಿನಿಮಾ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆಯುತ್ತಿದೆಯಂತೆ.

  ಶಾರುಖ್ ಖಾನ್ ಜೊತೆ ನಟಿಸಲು ದೀಪಿಕಾ ಮತ್ತು ಜಾನ್ ಅಬ್ರಹಾಂ ಇಷ್ಟೊಂದು ಸಂಭಾವನೆ ಕೇಳಿದ್ರಾ?ಶಾರುಖ್ ಖಾನ್ ಜೊತೆ ನಟಿಸಲು ದೀಪಿಕಾ ಮತ್ತು ಜಾನ್ ಅಬ್ರಹಾಂ ಇಷ್ಟೊಂದು ಸಂಭಾವನೆ ಕೇಳಿದ್ರಾ?

  ಶಾರುಖ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾದ ಬಗ್ಗೆ ಗೌಪ್ಯವಾಗಿ ಇಡಬೇಕು ಎನ್ನುವುದು ಚಿತ್ರತಂಡದ ಪ್ಲಾನ್ ಆಗಿತ್ತು. ಆದರೆ ಆಗಲೇ ಶಾರುಖ್ ಚಿತ್ರೀಕರಣ ಪ್ರಾರಂಭ ಮಾಡಿರುವ ವಿಚಾರ ಬಹಿರಂಗವಾಗಿದೆ. 2 ವರ್ಷದ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿರುವ ಬಗ್ಗೆ ಶಾರುಖ್ ಸಹ ಎಲ್ಲಿಯೂ ಹೇಳಿಕೊಂಡಿಲ್ಲ. ಸೈಲೆಂಟ್ ಆಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

  ಶಾರುಖ್ ಕೊನೆಯದಾಗಿ 2018ರಲ್ಲಿ ರಿಲೀಸ್ ಆದ ಝೀರೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಳಿಕ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಸಿದ್ಧಾರ್ಥ್ ಆನಂದ್ ಅವರ ಕಥೆ ಕೇಳಿ ಇಂಪ್ರೆಸ್ ಆಗಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

  ಗೊಳಾಡುತ್ತಿದ್ದಾರೆ ಒಂದು ಕಾಲದ ಸ್ಟಾರ್ ನಟ | Filmibeat Kannada

  ಅಂದ್ಹಾಗೆ ಪಠಾಣ್ ಸಿನಿಮಾದಲ್ಲಿ ಶಾರುಖ್ ಖಾನ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳುತ್ತಿದ್ದಾರೆ. ಖಳನಟನಾಗಿ ಜಾನ್ ಅಬ್ರಹಾಂ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಾಗುತ್ತಿದೆಯಂತೆ. ಮುಂದಿನ ವರ್ಷ ದೀಪಾವಳಿಗೆ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

  English summary
  Bollywood Actor Shah Rukh Khan starts shooting for Pathan from today.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X