For Quick Alerts
  ALLOW NOTIFICATIONS  
  For Daily Alerts

  ಪತಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆನ್ನಲ್ಲೇ ವೈಷ್ಣೋದೇವಿ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ

  |

  ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿಯ ಬಂಧನದ ನಡುವೆಯೂ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಅಷ್ಟೆಯಲ್ಲ ಇದೀಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಪ್ರಸಿದ್ಧ ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದಾರೆ. ಜಮ್ಮು ಕಾಶ್ಮೀರದ ವೈಷ್ಣೋ ದೇವಿ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಶಿಲ್ಪಾ ಶೆಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ ದಿನವೇ ಪತಿ ರಾಜ್ ಕುಂದ್ರ ವಿರುದ್ಧ ಮುಂಬೈ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಎರಡನೇ ಚಾರ್ಜ್ ಶೀಟ್ ಇದಾಗಿದೆ. 1467 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ. ಇದರಲ್ಲಿ 43 ಮಂದಿ ಸಾಕ್ಷಿಧಾರರ ಹೇಳಿಕೆಗಳು ದಾಖಲಾಗಿವೆ. ಐದು ವ್ಯಕ್ತಿಗಳು 164 ಸಿ ಆರ್ ಪಿ ಸಿ ಪ್ರಕಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ.

  ಈ ಬೆಳವಣಿಗೆ ಬೆನ್ನಲ್ಲೇ ಪತಿ ಶಿಲ್ಪಾ ಶೆಟ್ಟಿ ದೇವಿ ದರ್ಶನಕ್ಕೆ ಹೊರಟಿರುವುದು ಅಚ್ಚರಿ ಮೂಡಿಸಿದೆ. ಶಿಲ್ಪಾ ಶೆಟ್ಟಿ ಬುಧವಾರ (ಸೆಪ್ಟಂಬರ್ 15) ಗುಹೆ ದೇಗುಲದ ಬೇಸ್ ಕ್ಯಾಂಪ್ ಕತ್ರಾಗೆ ಆಗಮಿಸಿದರು. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಲ್ಪಾ ಶೆಟ್ಟಿ ಪೊಲೀಸ್ ಸಿಬ್ಬಂದಿಯೊಂದಿಗೆ ಕುದುರೆಯ ಮೇಲೆ ದೇಗುಲಕ್ಕ ಪ್ರಯಾಣ ಬೆಳೆಸಿದರು. ಪ್ರಯಾಣದ ಸಮಯದಲ್ಲಿ 'ಜೈ ಮಾತಾ' ಎಂದು ಜಪಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ದೇವರ ದರ್ಶನದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶಿಲ್ಪಾ ಶೆಟ್ಟಿ, "ನಾನು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ದೇವಿಯ ಕರೆಯಿಂದ ನಾನು ಇಲ್ಲಿಗೆ ಬಂದಿದ್ದು, ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ" ಎಂದು ಹೇಳಿದರು.

  ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಬಂಧನದ ಬಳಿಕ ಸುಮಾರು ಒಂದು ತಿಂಗಳು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಟ್ರೋಲ್ ಗೆ ಗುರಿಯಾಗಿದ್ದ ಶಿಲ್ಪಾ ಶೆಟ್ಟಿ ಬಳಿಕ ಡಾನ್ಸ್ ರಿಯಾಲಿಟಿ ಶೋ ಸೂಪರ್ ಡಾನ್ಸರ್ ಶೋನಲ್ಲಿ ಕಾಣಿಸಿಕೊಂಡಿದರು. ಈ ಶೋನಲ್ಲಿ ಶಿಲ್ಪಾ ಶೆಟ್ಟಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಹಂಗಾಮ-2 ಸಿನಿಮಾ ಬಿಡುಗಡೆಯಾಗಿದೆ.

  ಸದ್ಯ ಮತ್ತೆ ಆಕ್ಟೀವ್ ಆಗಿರುವ ಶಿಲ್ಪಾ ಶೆಟ್ಟಿ ಇತ್ತೀಚಿಗಷ್ಟೆ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಿದ್ದರು. ಪತಿಯ ಗೈರಿನ ಜೊತೆಗೆ ಶಿಲ್ಪಾ ಶೆಟ್ಟಿ ಮನೆಯಲ್ಲಿ ಹಬ್ಬದ ಸಂಭ್ರಮ ಜೋರಾಗಿತ್ತು. ಗಣೇಶನನ್ನು ಹೊತ್ತು ಬಂದು ಮನೆಯಲ್ಲಿ ಗಣೇಶ ಕೂರಿಸಿ ಅದ್ದೂರಿಯಾಗಿ ಹಬ್ಬ ಮಾಡಿದ್ದರು. ಶಿಲ್ಪಾ ಶೆಟ್ಟಿ ಗಣೇಶ ಉತ್ಸವದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಬ್ಬ ಮುಗಿಸುತ್ತಿದ್ದಂತೆ ಶಿಲ್ಪಾ ಶೆಟ್ಟಿ ದೇವಿಯ ದರ್ಶನಕ್ಕೆ ಹೊರಟಿರುವುದು ಅಚ್ಚರಿ ಮೂಡಿಸಿದೆ.

  ಇನ್ನು ಪತಿ ರಾಜ್ ಕುಂದ್ರ ವಿಚಾರಕ್ಕೆ ಬರುವುದಾದರೆ ಅಶ್ಲೀಲ ವಿಡಿಯೋ ಚಿತ್ರೀಕರಣ ಸಂಬಂಧ ಜೈಲು ಸೇರಿರುವ ಕುಂದ್ರ ವಿರುದ್ಧ ಈಗಾಗಲೇ 1400ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರಾಜ್ ಕುಂದ್ರಾ ಮಾತ್ರವೇ ಅಲ್ಲದೆ ಪ್ರಕರಣದ ಇನ್ನುಳಿದ ಆರೋಪಿಗಳಾದ ರಯಾನ್ ಥೋರ್ಪ್ ಪೊಲೀಸರಿಂದ ತಲೆಮರೆಸಿಕೊಂಡಿರುವ ಅಥವಾ ಬಂಧನಕ್ಕೆ ಒಳಪಟ್ಟಿರದ ಪ್ರದೀಪ್ ಭಕ್ಷಿ ಹಾಗೂ ಇನ್ನೊಬ್ಬರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

  ಈ ವರ್ಷದ ಏಪ್ರಿಲ್ ನಲ್ಲಿ ಮುಂಬೈ ಅಪರಾಧ ವಿಭಾಗದ ಪೋಲೀಸರು ಒಂಬತ್ತು ಜನರ ವಿರುದ್ಧ ಮೊದಲ ಆರೋಪಪಟ್ಟಿ ಸಲ್ಲಿಸಿದ್ದರು. ರಾಜ್ ಕುಂದ್ರ ಮತ್ತು ರಯಾನ್ ಥಾರ್ಪೆ ಅವರನ್ನು ಮುಂಬೈ ಪೊಲೀಸರು ಜುಲೈ 19ರಂದು ಬಂಧಿಸಿದ್ದರು. ಸದ್ಯ ರಾಜ್ ಕುಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ.

  English summary
  Bollywood Actress Shilpa Shetty visits Vaishno Devi as chargesheet filed against Raj Kundra.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X