ರಶ್ಮಿಕಾ ಮಂದಣ್ಣ ಜೊತೆ ಚಿತ್ರೀಕರಣ ಆರಂಭಿಸಿದ ಸಿದ್ಧಾರ್ಥ್ ಮಲ್ಹೋತ್ರಾ
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು. 'ಮಿಷನ್ ಮಜ್ನು' ಚಿತ್ರೀಕರಣಕ್ಕಾಗಿ ಲಕ್ನೌ ಕಡೆ ಪ್ರಯಾಣ ಬೆಳೆಸಿದ್ದ ನಟ ಮೊದಲ ದಿನ ಚಿತ್ರೀಕರಣ ಆರಂಭಿಸಿದ್ದಾರೆ.
Recommended Video
ಮೊದಲ ದಿನ ಚಿತ್ರದ ಸೆಟ್‌ಗೆ ಭೇಟಿ ನೀಡಿರುವ ಸಿದ್ಧಾರ್ಥ್ ಮಲ್ಹೋತ್ರಾ ನಟಿ ರಶ್ಮಿಕಾ ಮಂದಣ್ಣ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇಬ್ಬರ ತಮ್ಮ ಕೈಯಲ್ಲಿ ಚಿತ್ರದ ಸ್ಕ್ರಿಪ್ಟ್ ಬುಕ್ ಹಿಡಿದುಕೊಂಡಿರುವ ಫೋಟೋವನ್ನು ಸಿದ್ಧಾರ್ಥ್ ಹಂಚಿಕೊಂಡಿದ್ದಾರೆ.
ಟ್ವಿಟ್ಟರ್‌ನಲ್ಲಿ ರಶ್ಮಿಕಾ ಜೊತೆಗಿನ ಫೋಟೋ ಶೇರ್ ಮಾಡಿರುವ ಸಿದ್ಧಾರ್ಥ್ ''ವಿಶೇಷವಾದ ತಂಡದ ಜೊತೆ ವಿಶೇಷವಾದದು'' ಎಂದು ಬರೆದುಕೊಂಡಿದ್ದಾರೆ.

ಅಂದ್ಹಾಗೆ, ಮಿಷನ್ ಮಜ್ನು ಚಿತ್ರ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಚೊಚ್ಚಲ ಬಾಲಿವುಡ್ ಸಿನಿಮಾ. ಶಾಂತನು ಬಾಗ್ಚಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇದೊಂದು ಸ್ಪೈ ಥ್ರಿಲ್ಲರ್ ಕಥೆ ಹೊಂದಿದೆ. ರೋನಿ ಸ್ಕ್ರೂವಾಲಾ, ಗರಿಮಾ ಮೆಹ್ತಾ ಮತ್ತು ಅಮರ್ ಬುಟಾಲಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
1970ರ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗುತ್ತಿದೆ. ಡಿಸೆಂಬರ್ 20, 2020ರಲ್ಲಿ 'ಮಿಷನ್ ಮಜ್ನು' ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು.


Click it and Unblock the Notifications











