Just In
Don't Miss!
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- News
ಪೆಟ್ರೋಲ್ ಪಂಪ್ಗಳಿಂದ ಪ್ರಧಾನಿ ಮೋದಿ ಫೋಟೊ ತೆರವಿಗೆ ಚುನಾವಣಾ ಆಯೋಗ ಸೂಚನೆ
- Automobiles
31 ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ಟಾಟಾ ಹೊಸ ಸಿಗ್ನಾ 3118.ಟಿ ಟ್ರಕ್ ಬಿಡುಗಡೆ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Sports
'ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲಿ ನಾನು ಇಂಗ್ಲೆಂಡ್ಗೆ ಚಿಯರ್ ಮಾಡ್ತೇನೆ'
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಏಪ್ರಿಲ್ 2 ರಂದು ಅಕ್ಷಯ್ ಕುಮಾರ್ 'ಸೂರ್ಯವಂಶಿ' ಬಿಡುಗಡೆ
ಅಕ್ಷಯ್ ಕುಮಾರ್ ಮತ್ತು ಕತ್ರಿನಾ ಕೈಫ್ ನಟನೆಯ ಭಾರಿ ನಿರೀಕ್ಷೆಯ 'ಸೂರ್ಯವಂಶಿ' ಸಿನಿಮಾ ಏಪ್ರಿಲ್ 2 ರಂದು ಬಿಡುಗಡೆಯಾಗಲಿದೆ. ಆದರೆ, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾತ್ರ ಅಕ್ಷಯ್ ಕುಮಾರ್ ಸಿನಿಮಾ ತೆರೆಗೆ ಬರ್ತಿದೆ ಎಂದು ಹೇಳಲಾಗುತ್ತಿದೆ.
ಕೊರೊನಾ ಕಾರಣದಿಂದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿತ್ತು. ಟ್ರೈಲರ್ ರಿಲೀಸ್ ಆದ ಕ್ಷಣದಿಂದ ಚಿತ್ರದ ಬಿಡುಗಡೆಗಾಗಿ ಕಾಯುತ್ತಿರುವ ಪ್ರೇಕ್ಷಕರಿಗೆ ಕೊನೆಗೂ ರೋಹಿತ್ ಶೆಟ್ಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
'ವಿದೇಶಿ ಪ್ರಜೆ ಅಕ್ಷಯ್ ಕುಮಾರ್ ಭಾರತದ ಆಂತರಿಕ ವಿಷಯದಲ್ಲಿ ಮೂಗುತೂರಿಸುವುದೇಕೆ'
ಅದ್ರೆ, ಸೂರ್ಯವಂಶಿ ಚಿತ್ರದ ಮೇಲೆ ಮಲ್ಟಿಪ್ಲೆಕ್ಸ್ ಮಾಲೀಕರು ಬೇಸರ ಮಾಡಿಕೊಳ್ಳುವಂತಾಗಿದೆ. ಸಿನಿಮಾದ ಬಿಡುಗಡೆ ಹಿನ್ನೆಲೆ ರೋಹಿತ್ ಶೆಟ್ಟಿ ಮತ್ತು ರಿಲಾಯನ್ಸ್ ಸಂಸ್ಥೆ ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಕೆಲವು ಷರತ್ತು ನೀಡಿದ್ದರು. ಇದಕ್ಕೆ ಮಲ್ಟಿಪ್ಲೆಕ್ಸ್ ಮಾಲೀಕರು ಒಪ್ಪದ ಕಾರಣ ಚಿತ್ರವನ್ನು ಸಿಂಗಲ್ ಸ್ಕ್ರೀನ್‌ನಲ್ಲಿ ಮಾತ್ರ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ಈ ಕುರಿತು ರೋಹಿತ್ ಶೆಟ್ಟಿ ಅವರ ಆಪ್ತರೊಬ್ಬರು 'ಪಿಂಕ್ ವಿಲ್ಲ' ಜೊತೆ ಮಾತನಾಡಿದ್ದು, ''ಯಾವ ನಿರ್ಮಾಪಕನು ನಷ್ಟ ಮಾಡಿಕೊಳ್ಳುವಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಚಿತ್ರಮಂದಿರಗಳಲ್ಲಿ ಸೂರ್ಯವಂಶಿ ತೆರೆಗೆ ಬರಲಿದೆ'' ಎಂದು ಮಾಹಿತಿ ನೀಡಿದ್ದಾರೆ.
ಅಂದ್ಹಾಗೆ, ಸೂರ್ಯವಂಶಿ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಕೊರೊನಾ ಕಾರಣದಿಂದ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಒಂದು ಹಂತದಲ್ಲಿ ಒಟಿಟಿಯಲ್ಲಿ ಸೂರ್ಯವಂಶಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದ್ರೀಗ, ಚಿತ್ರಮಂದಿರದಲ್ಲೇ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಕತ್ರಿನಾ ಕೈಫ್ ಹಾಗೂ ಅತಿಥಿ ಪಾತ್ರಗಳಲ್ಲಿ ಅಜಯ್ ದೇವಗನ್, ರಣ್ವೀರ್ ಸಿಂಗ್ ನಟಿಸಿದ್ದಾರೆ.