For Quick Alerts
  ALLOW NOTIFICATIONS  
  For Daily Alerts

  ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

  |

  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

  Upendra ಅಭಿನಯದ ಬ್ರಹ್ಮ ಚಿತ್ರ ತಯಾರಾದ ಕ್ಷಣಗಳು | FILMIBEAT KANNADA

  ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.

  ಬಿಹಾರ ಪೊಲೀಸರು ಸಲ್ಲಿಸಿದ್ದ ಎಫ್ ಐ ಆರ್ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂಬೈ ಪೊಲೀಸರು ತನಿಖೆಗೆ ಸಹರಿಕಬೇಕು, ತನಿಖೆಯ ದಾಖಲೆಗಳನ್ನುಸಿಬಿಐಗೆ ಹಸ್ತಾಂತರಿಸಬೇಕೆಂದು ಸುಪ್ರೀಂ ಕೊರ್ಟ್ ಆದೇಶಿಸಿದೆ.

  ಸಿಬಿಐ ತನಿಖೆಗೆ ಮುಂಬೈ ಪೊಲೀಸರ ವಿರೋಧವಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ರಿಯಾ ಮತ್ತು ಮುಂಬೈ ಪೊಲೀಸರಿಗೆ ಹಿನ್ನಡೆಯಾಗಿದೆ. ಈ ಮಹತ್ವದ ತೀರ್ಪು ಸುಶಾಂತ್ ಕುಟುಂಬಕ್ಕೆ ಸಿಕ್ಕ ಮೊದಲ ಜಯವಾಗಿದೆ.

  ಸುಶಾಂತ್ ಸಾವಿನ ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಪೊಲೀಸರು ಮತ್ತು ಬಿಹಾರ ಪೊಲೀಸರ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಬಿಹಾರ ಪೊಲೀಸರು ಸುಪ್ರೀಂ ಕೋರ್ಟಿ ಗೆ ಸಲ್ಲಿಸಿದ ಅರ್ಜಿಯಲ್ಲಿ ಮಹಾರಾಷ್ಟ್ರ ಪೊಲೀಸರು ರಾಜಕೀಯ ಒತ್ತಡದಿಂದ ಎಫ್ ಐ ಆರ್ ದಾಖಲಿಸಿಲ್ಲ. ಬಿಹಾರ ಪೊಲೀಸರಿಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.

  34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇಲ್ನೋಟಕ್ಕೆ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಹೇಳಿದ್ದರು. ಸುಶಾಂತ್ ಸಾವಿನ ಪ್ರಕರಣವನ್ನು ವಿವಿದ ಆಂಗಲ್ ಗಳಲ್ಲಿ ತನಿಖೆ ನಡೆಸುತ್ತಿದ್ದರು. ಇದೀಗ ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ಅಂಗಳದಲ್ಲಿದೆ.

  English summary
  Supreme Court orders CBI to investigate Sushant Singh Rajput death case.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X