Just In
Don't Miss!
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಪದ್ಮಾವತ್' ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ ಕೋರ್ಟ್
ದೀಪಿಕಾ ಪಡುಕೋಣೆ ಅಭಿನಯದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ರಾಷ್ಟ್ರಾದ್ಯಂತ ವಿವಾದಕ್ಕೆ ಒಳಗಾಗಿರುವ 'ಪದ್ಮಾವತ್' ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
'ಪದ್ಮಾವತ್' ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆ ಮೂಲಕ 'ಪದ್ಮಾವತ್' ಬಿಡುಗಡೆಗೆ ಇದ್ದ ತೊಡಕು ದೂರವಾಗಿದೆ.
'ಪದ್ಮಾವತ್' ಚಿತ್ರ ಬಿಡುಗಡೆಗೆ ವಿರೋಧಿಸಿ ರಜಪೂತ ಕರಣಿ ಸೇನೆ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ 'ಪದ್ಮಾವತ್' ಚಿತ್ರ ಬಿಡುಗಡೆ ಆದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 'ಪದ್ಮಾವತ್' ಚಿತ್ರ ಬಿಡುಗಡೆಗೆ ತಡೆ ಕೋರಿ ಎರಡು ರಾಜ್ಯಗಳ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತಿರಸ್ಕರಿಸಿದೆ.
'ಪದ್ಮಾವತಿ' ಎಕ್ಸ್ ಕ್ಲೂಸಿವ್ ವಿಮರ್ಶೆ: ವಿವಾದದ ಮಧ್ಯೆ ಸಿನಿಮಾ ನೋಡಿದ ಪತ್ರಕರ್ತ
''ಸಿನಿಮಾ ನೋಡಲು ಇಷ್ಟವಿಲ್ಲದವರು, ಅದನ್ನ ವೀಕ್ಷಿಸಬೇಡಿ. ಆದರೆ, ಚಿತ್ರದ ಪ್ರದರ್ಶನವನ್ನ ಬ್ಯಾನ್ ಮಾಡಲು ಸಾಧ್ಯವಿಲ್ಲ'' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೂ, 'ಪದ್ಮಾವತ್' ಬಿಡುಗಡೆ ವಿರೋಧಿಸಿ ಪ್ರತಿಭಟನೆ ಕಮ್ಮಿ ಆಗಿಲ್ಲ.
ಅಂದ್ಹಾಗೆ, ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ 'ಪದ್ಮಾವತ್' ಸಿನಿಮಾ ಜನವರಿ 25 ರಂದು ಬಿಡುಗಡೆ ಆಗಲಿದೆ. ಅಂದೇ ಭಾರತ್ ಬಂದ್ ಮಾಡಲು ಕರಣಿ ಸೇನೆ ಸದಸ್ಯರು ಮುಂದಾಗಿದ್ದಾರೆ.