ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು ಮಂಜೂರು
ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರಿಯಾ ಚಕ್ರವರ್ತಿ ಸಹೋದರ ಶೌವಿಕ್‌ಗೆ ಬುಧವಾರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಶೌವಿಕ್ ಚಕ್ರವರ್ತಿ ಸೆಪ್ಟೆಂಬರ್ ತಿಂಗಳಲ್ಲಿ ಅರೆಸ್ಟ್ ಆಗಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಪೆಡ್ಲರ್‌ಗಳ ಜೊತೆ ಸಂಬಂಧ ಹಾಗೂ ವ್ಯವಹಾರ ನಡೆಸಿರುವ ಆರೋಪದಲ್ಲಿ ಎನ್‌ಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಸುಶಾಂತ್ ಸಿಂಗ್ ರಜಪೂರ್ ಸಾವಿನ ಸಂಬಂಧ ತನಿಖೆ ನಡೆಸುತ್ತಿರುವ ವೇಳೆ ಡ್ರಗ್ಸ್ ಆಯಾಮದಲ್ಲಿ ರಿಯಾ ಚಕ್ರವರ್ತಿ ಬಂಧನವಾದರು. ಅದೇ ದಿನ ರಿಯಾ ಸಹೋದರನ ಬಂಧನ ಸಹ ಆಗಿತ್ತು.

ಇದೇ ಪ್ರಕರಣದಲ್ಲಿ ಬಂಧನವಾಗಿದ್ದ ರಿಯಾ ಚಕ್ರವರ್ತಿಗೆ ಅಕ್ಟೋಬರ್ 7 ರಂದು ಬಾಂಬೆ ಹೈ ಕೋರ್ಟ್‌ನಿಂದ ಜಾಮೀನು ಮಂಜೂರಾಗಿತ್ತು. ಇದೀಗ, ರಿಯಾ ಸಹೋದರನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಂದ್ಹಾಗೆ, ಜೂನ್ 14 ರಂದು ಮುಂಬೈನ ತನ್ನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ದೇಹ ಸಿಕ್ಕಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಪೊಲೀಸರು ನಿರ್ಧರಿಸಿ ತನಿಖೆ ಆರಂಭಿಸಿದರು.
ಆದ್ರೆ, ಸುಶಾಂತ್ ಸಿಂಗ್ ಅವರದ್ದು ಕೊಲೆ ಎಂದು ಆತನ ಕುಟುಂಬಸ್ಥರು ವಾದಿಸಿದ್ದಾರೆ. ಮುಂಬೈ ಮತ್ತು ಪಾಟ್ನಾದಲ್ಲಿ ಪ್ರತ್ಯೇಕ ಕೇಸ್ ದಾಖಲಾಗಿತ್ತು. ಪಾಟ್ನಾ ಪ್ರಕರಣದ ಹಿನ್ನೆಲೆ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು.


Click it and Unblock the Notifications











