ಸುಶಾಂತ್ ಸಿಂಗ್ ರಜಪೂತ್ ಡೆತ್ ಕೇಸ್: ಸಿಬಿಐ ವಿರುದ್ಧ ಹೈಕೋರ್ಟ್ ಮೊರೆ ಹೋದ ನಟಿ ರಿಯಾ ಚಕ್ರವರ್ತಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ವಿರುದ್ಧ ಹೊರಡಿಸಿರುವ ಲುಕ್‌ಔಟ್ ಸುತ್ತೋಲೆಯನ್ನು ಪ್ರಶ್ನಿಸಿ ನಟಿ ರಿಯಾ ಚಕ್ರವರ್ತಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಅವರು ಜೂನ್ 14, 2020 ರಂದು ಉಪನಗರ ಬಾಂದ್ರಾದಲ್ಲಿನ ಅವರ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆ ವರ್ಷದ ಜುಲೈನಲ್ಲಿ ಸುಶಾಂತ್ ಅವರ ಗರ್ಲ್‌ಫ್ರೆಂಡ್ ಆಗಿದ್ದ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಂಬಂಧಿಕರು ಸುಶಾಂತ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಅವರ ತಂದೆ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು.

ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ರಿಯಾ ಚಕ್ರವರ್ತಿ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಮಾಜಿ ಗೆಳತಿ ನಟಿ ರಿಯಾ ಚಕ್ರವರ್ತಿ ವಿರುದ್ಧ ಲುಕ್‌ಔಟ್ ಸುತ್ತೋಲೆ (LOC) ಹೊರಡಿಸಿದೆ. ಘಟನೆ ನಡೆದು ಮೂರು ವರ್ಷವಾದರೂ ಇನ್ನು ತಮ್ಮ ವಿರುದ್ಧದ ಸುತ್ತೋಲೆಯನ್ನು ರದ್ದು ಮಾಡಿಲ್ಲ ಎಂದು ನಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಟಿ, ಮಾಡೆಲ್ ಮತ್ತು ಕಿರುತೆರೆ ಕಾರ್ಯಕ್ರಮದ ತೀರ್ಪುಗಾರರಾಗಿ ಕೆಲಸ ಮಾಡುತ್ತಿರುವ ನಟಿ ತನ್ನ ವೃತ್ತಿ ಸಂಬಂಧಿತ ಕಾರ್ಯಕ್ರಮಕ್ಕಾಗಿ ವಿದೇಶಕ್ಕೆ ಹೋಗಬೇಕಾಗಿದೆ. ಇದೇ ಕಾರಣಕ್ಕೆ ಲುಕ್‌ಔಟ್ ಸುತ್ತೋಲೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ವಿಶೇಷವೆಂದರೆ, ಹೈಕೋರ್ಟ್ ಈ ಪ್ರಕರಣವನ್ನು ಡಿಸೆಂಬರ್ 20 ರಂದು ವಿಚಾರಣೆ ನಡೆಸಲಿದೆ.
ಶುಕ್ರವಾರ, ನಟಿ ಪರ ವಕೀಲ ಅಭಿನವ್ ಚಂದ್ರಚೂಡ್ ಅವರು ನ್ಯಾಯಮೂರ್ತಿ ಎ ಎಸ್ ಗಡ್ಕರಿ ನೇತೃತ್ವದ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಎಫ್‌ಐಆರ್ ದಾಖಲಿಸಿ ಸುಮಾರು ಮೂರು ವರ್ಷಗಳು ಕಳೆದಿವೆ ಮತ್ತು ಲುಕ್‌ಔಟ್ ಸುತ್ತೋಲೆ ಹೊರಡಿಸಿದೆ ಆದರೆ ಇಲ್ಲಿಯವರೆಗೆ ಯಾವುದೇ ಪ್ರಗತಿಯಾಗಿಲ್ಲ. ಎಇಯಾ ಚಕ್ರವರ್ತಿ ಅವರಿಗೆ ಸಿಬಿಐ ಎಂದಿಗೂ ಸಮನ್ಸ್ ನೀಡಿಲ್ಲ ಮತ್ತು ಆರೋಪಪಟ್ಟಿಯನ್ನೂ ಸಲ್ಲಿಸಿಲ್ಲ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಇನ್ನು, ನಟಿ ರಿಯಾ ಚಕ್ರವರ್ತಿ ಅವರು ಈ ಹಿಂದೆ ವಿದೇಶ ಪ್ರವಾಸ ಮಾಡಿದ್ದಾರಾ ಎಂಬುದನ್ನು ತಿಳಿದುಕೊಳ್ಳಲು ವಿಭಾಗೀಯ ಪೀಠ ಪ್ರಯತ್ನಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದ ನಟಿ ವಿದೇಶಕ್ಕೆ ತೆರಳಲು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದಿಂದ ಅನುಮತಿ ಪಡೆದಿದ್ದರು. ಆದರೆ ಸಿಬಿಐನ ಲುಕ್‌ಔಟ್ ಸುತ್ತೋಲೆಯಿಂದಾಗಿ ವಿದೇಶಕ್ಕೆ ತೆರಳಲು ಸಾಧ್ಯವಾಗಲಿಲ್ಲ ಎಂದು ವಕೀಲ ಅಭಿನವ್ ಚಂದ್ರಚೂಡ್ ಮಾಹಿತಿ ನೀಡಿದ್ದಾರೆ. ನಂತರ ಪೀಠವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 20 ಕ್ಕೆ ಮುಂದೂಡಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವು
ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14, 2020 ರಂದು ಉಪನಗರ ಬಾಂದ್ರಾದಲ್ಲಿನ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಅಪಘಾತ ಸಾವಿನ ವರದಿಯನ್ನು (ಎಡಿಆರ್) ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಜುಲೈ 2020 ರಲ್ಲಿ ಬಿಹಾರದಲ್ಲಿ ದೂರು ದಾಖಲಾಗಿತ್ತು. ನಂತರ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಆಗಸ್ಟ್ 2020 ರಲ್ಲಿ ರಿಯಾ ಮತ್ತು ಅವರ ಸಹೋದರ ಶೋಕ್ ಚಕ್ರವರ್ತಿ ವಿರುದ್ಧ ಲುಕ್‌ಔಟ್ ಸುತ್ತೋಲೆಯನ್ನು ಹೊರಡಿಸಲಾಯಿತು.
ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಶೋಕ್ ಚಕ್ರವರ್ತಿಗೆ ವಿದೇಶ ಪ್ರಯಾಣಕ್ಕೆ ಅನುವು ಮಾಡಿಕೊಡುವ ಸುತ್ತೋಲೆಯನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಅಮಾನತುಗೊಳಿಸಿತು. ಇನ್ನು, ಮಾದಕವಸ್ತು ಪ್ರಕರಣದಲ್ಲಿ ರಿಯಾ ಮತ್ತು ಶೋಕ್ ಇಬ್ಬರನ್ನೂ 2020 ರಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿತ್ತು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.


Click it and Unblock the Notifications










