For Quick Alerts
  ALLOW NOTIFICATIONS  
  For Daily Alerts

  ಸುಶಾಂತ್ ಸಿಂಗ್ ಸಾವು: ನಿರ್ದೇಶಕ ದಿನೇಶ್ ವಿಜನ್ ಮನೆ ಮೇಲೆ ED ದಾಳಿ

  |

  ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಮನಿ ಲ್ಯಾಂಡರಿಂಗ್ ಪ್ರಕರಣದ ಹಿನ್ನೆಲೆ ನಿರ್ದೇಶಕ ದಿನೇಶ್ ವಿಜನ್ ಸೇರಿದ ನಾಲ್ಕು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ದಾಳಿ ನಡೆಸಿದೆ.

  ದಿನೇಶ್ ವಿಜನ್ ಅವರಿಗೆ ಸಂಬಂಧಿಸಿದಂತೆ ನಾಲ್ಕು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಆದ್ರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

  ಸುಶಾಂತ್ ಸಿಂಗ್ ಜ್ಯೂಸ್ ಕುಡಿದ ಗ್ಲಾಸನ್ನು ಪೊಲೀಸರು ಯಾಕೆ ಸಂಗ್ರಹಿಸಿಲ್ಲ? ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

  2017ರಲ್ಲಿ ಬಿಡುಗಡೆಯಾದ "ರಾಬ್ತಾ" ಚಿತ್ರದ ಮೂಲಕ ದಿನೇಶ್ ವಿಜನ್ ನಿರ್ದೇಶಕರಾಗಿ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. ಸುಶಾಂತ್ ಸಿಂಗ್ ರಜಪೂತ್ ಮತ್ತು ಕೃತಿ ಸನನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜನ್ ಈ ಚಿತ್ರದ ಸಹ ನಿರ್ಮಾಪಕರೂ ಆಗಿದ್ದರು.

  ಸುಶಾಂತ್ ಸಿಂಗ್ ರಜಪೂತ್ ತಂದೆ ಕೆಕೆ ಸಿಂಗ್ ಅವರು ಬಿಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಿಹಾರ್ ಪೊಲೀಸರು ದಾಖಲಿಸಿದ್ದ ಎಫ್‌ ಐ ಆರ್ ಅನ್ವಯ ಜಾರಿ ನಿರ್ದೇಶನಾಲಯ ಮನಿ ಲ್ಯಾಂಡರಿಂಗ್ ಕೇಸ್ ದಾಖಲಿಸಿಕೊಂಡಿತ್ತು.

  ಸುಶಾಂತ್ ಸಿಂಗ್ ಅವರ ಕೊಟಕ್ ಮಹೀಂದ್ರಾ ಬ್ಯಾಂಕ್ ಖಾತೆಯಿಂದ 15 ಕೋಟಿ ರೂ ಇತರ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಆರೋಪಿಸಿದ್ದರು. ಈ ಕೇಸ್‌ನಲ್ಲಿ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ, ಅವಳ ಸಹೋದರ ಶೌವಿಕ್ ಮತ್ತು ತಂದೆ ಇಂದ್ರಜಿತ್ ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

  English summary
  ED is conducting searches at movie director Dinesh Vijan's home and office premises (of "Raabta" fame) in connection with Sushant Singh Rajput death.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X