For Quick Alerts
  ALLOW NOTIFICATIONS  
  For Daily Alerts

  ಸುಶಾಂತ್ ಸಿಂಗ್ ಫ್ಲ್ಯಾಟ್ ಸ್ನೇಹಿತ ಸಿದ್ಧಾರ್ಥ್ ಬಂಧಿಸಿದ ಎನ್‌ಸಿಬಿ

  |

  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಮುಗಿಯದ ಕಥೆಯಾಗಿದೆ. ಸುಶಾಂತ್ ಮೃತಪಟ್ಟು ವರ್ಷ ಕಳೆಯುತ್ತಿದೆ. ಇದುವರೆಗೂ ನಿಖರವಾದ ಕಾರಣವನ್ನು ಭೇದಿಸುವಲ್ಲಿ ಪೊಲೀಸರು, ಸಿಬಿಐ ಯಶಸ್ವಿಯಾಗಿಲ್ಲ.

  ಇದೀಗ, ಇಡೀ ದೇಶ ಕೊರೊನಾದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಎನ್‌ಸಿಬಿ ಪೊಲೀಸರು ಸುಶಾಂತ್ ಸಿಂಗ್ ಸ್ನೇಹಿತ ಹಾಗೂ ಫ್ಯ್ಲಾಟ್‌ಮೇಟ್ ಆಗಿದ್ದ ಸಿದ್ಧಾರ್ಥ್ ಪಿಥಾಣಿಯನ್ನು ಬಂಧಿಸಿ ಪ್ರಕರಣ ಬಗ್ಗೆ ಕುತೂಹಲ ಹೆಚ್ಚಿಸಿದೆ.

  'ಅಕ್ಕನಿಗಾಗಿ ಡ್ರಗ್ಸ್ ಖರೀದಿಸುತ್ತಿದ್ದೆ': ಎನ್‌ಸಿಬಿ ಮುಂದೆ ಸತ್ಯ ಬಿಚ್ಚಿಟ್ಟ ರಿಯಾ ಸಹೋದರ'ಅಕ್ಕನಿಗಾಗಿ ಡ್ರಗ್ಸ್ ಖರೀದಿಸುತ್ತಿದ್ದೆ': ಎನ್‌ಸಿಬಿ ಮುಂದೆ ಸತ್ಯ ಬಿಚ್ಚಿಟ್ಟ ರಿಯಾ ಸಹೋದರ

  ಸುಶಾಂತ್ ಸಿಂಗ್ ಸಾವಿಗೂ ಮುನ್ನ ಫ್ಲ್ಯಾಟ್‌ನಲ್ಲಿ ನಾಲ್ಕು ಜನರು ಇದ್ದರು ಎಂಬ ಮಾಹಿತಿ ಇದೆ. ಅದರಲ್ಲಿ ಒಬ್ಬರಾಗಿದ್ದ ಸಿದ್ಧಾರ್ಥ್ ಪಿಥಾಣಿಯನ್ನು ಹೈದರಾಬಾದ್‌ನಲ್ಲಿ ಎನ್‌ಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

  ಈ ಮೊದಲೇ ಮುಂಬೈ ಪೊಲೀಸರು, ಸಿಬಿಐ ಅಧಿಕಾರಿಗಳು ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಸಿದ್ದಾರ್ಥ್ ಪಿಥಾನಣಿಯನ್ನು ಹಲವು ಬಾರಿ ವಿಚಾರಣೆ ನಡೆಸಿದ್ದರು. ವರ್ಷದ ಬಳಿಕ ಸಿದ್ಧಾರ್ಥ್ ಅರೆಸ್ಟ್ ಮಾಡುತ್ತಿರುವುದು ಅನುಮಾನ ಮೂಡಿಸಿದೆ.

  ಜೂನ್ 14, 2020ರಲ್ಲಿ ಮುಂಬೈನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಶವ ಪತ್ತೆಯಾಗಿತ್ತು. ಅನುಮಾನಸ್ಪಾದ ಸಾವು ಎಂಬ ಕಾರಣಕ್ಕೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಸ್ನೇಹಿತರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದರು. ಬಳಿಕ, ಈ ಕೇಸ್‌ ಸಿಬಿಐಗೆ ವರ್ಗಾವಣೆ ಆಯಿತು.

  ಸೀಲ್ ಡೌನ್ ಆಗಿರೋ ಏರಿಯಾದಲ್ಲಿ Harshaka ಮತ್ತು Bhuvan ಮಾಡಿದ್ದೇನು ನೋಡಿ | Filmibeat Kannada

  ಮತ್ತೊಂದೆಡೆ ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ, ಸಹೋದರರ ಶೌವಿಕ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಈಗ ಇದೇ ಕೇಸ್‌ನಲ್ಲಿ ಸಿದ್ಧಾರ್ಥ್ ಪಿಥಾಣಿಯನ್ನು ಅರೆಸ್ಟ್ ಮಾಡಲಾಗಿದೆ.

  English summary
  Sushanth singh Rajput Drugs Probe: Sushant flatmate siddharth pithani arrested by NCB at Hyderabad.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X