ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್'.!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿ ಕುರಿತಾದ ಚಿತ್ರ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಬಿಡುಗಡೆಗೂ ಮುನ್ನ ವಿವಾದದ ಕೇಂದ್ರಬಿಂದು ಆಗಿತ್ತು. ಟ್ರೈಲರ್ ರಿಲೀಸ್ ಆದಾಗಲೇ ದೇಶದ ಮೂಲೆ ಮೂಲೆಯಲ್ಲೂ ಈ ಚಿತ್ರ ಕಾಂಟ್ರವರ್ಸಿಯ ಕಿಡಿ ತಗುಲಿಸಿತ್ತು.

ಆದ್ರೆ, ತೆರೆಗೆ ಬಂದ್ಮೇಲೆ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಮ್ಯಾಜಿಕ್ ಮಾಡುವಲ್ಲಿ ವಿಫಲ ಆಗಿದೆ. ಅನುಪಮ್ ಖೇರ್ ಅಭಿನಯದ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಅಕ್ಷರಶಃ ಸೋತಿದೆ.

ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿರುವ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಪ್ರೇಕ್ಷಕರನ್ನು ಇಂಪ್ರೆಸ್ ಮಾಡಿಲ್ಲ. ಮೇಲಾಗಿ, 'ಉರಿ: ದಿ ಸರ್ಜಿಕಲ್ ಸ್ಟ್ರೈಕ್', 'ಸಿಂಬಾ' ಮತ್ತು 'ಕೆ.ಜಿ.ಎಫ್' ಚಿತ್ರಗಳಿಂದ ಪ್ರಬಲ ಸ್ಪರ್ಧೆ ಎದುರಿಸುತ್ತಿರುವ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಕಲೆಕ್ಷನ್ ಲೆಕ್ಕಾಚಾರದಲ್ಲಿ ಹಿಂದೆ ಬಿದ್ದಿದೆ. ಮುಂದೆ ಓದಿರಿ...

'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಮಾಡಿರುವ ಕಲೆಕ್ಷನ್ ಎಷ್ಟು.?

'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಮಾಡಿರುವ ಕಲೆಕ್ಷನ್ ಎಷ್ಟು.?

ಕಳೆದ ವಾರ ಬಿಡುಗಡೆ ಆಗಿದ್ದ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಐದು ದಿನಗಳಲ್ಲಿ ಕೇವಲ 15.50 ಕೋಟಿ ಕಲೆಕ್ಷನ್ ಮಾಡಿದೆ. ಬಹು ನಿರೀಕ್ಷೆ ಹುಟ್ಟುಹಾಕಿದ್ದ ವಿಜಯ್ ರತ್ನಾಕರ್ ಗುಟ್ಟೆ ನಿರ್ದೇಶನದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿಲ್ಲ.

ಪುಸ್ತಕ ಆಧರಿಸಿದ ಚಿತ್ರ

ಪುಸ್ತಕ ಆಧರಿಸಿದ ಚಿತ್ರ

ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಬರೆದ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಪುಸ್ತಕವನ್ನು ಆಧರಿಸಿ ತಯಾರಾದ ಚಿತ್ರ ಇದು. ಮನಮೋಹನ್ ಸಿಂಗ್ ಪಾತ್ರದಲ್ಲಿ ಅನುಪಮ್ ಖೇರ್ ನಟಿಸಿದ್ದಾರೆ.

ವಿವಾದ ಸೃಷ್ಟಿಸಿದ ಸಿನಿಮಾ

ವಿವಾದ ಸೃಷ್ಟಿಸಿದ ಸಿನಿಮಾ

ಈ ಚಿತ್ರದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವರನ್ನು ಕೇವಲವಾಗಿ ಬಿಂಬಿಸಲಾಗಿದೆ. ಅಲ್ಲದೇ, ಮನಮೋಹನ್ ಸಿಂಗ್ ರನ್ನು ನೆಗೆಟಿವ್ ಆಗಿ ತೋರಿಸಲಾಗಿದೆ ಅಂತ ವಿವಾದ ಶುರುವಾಗಿತ್ತು. ಅಲ್ಲದೇ, ಚಿತ್ರದ ಬಗ್ಗೆ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ

ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ

ಜನವರಿ 18 ರಂದು ತಮಿಳು ಮತ್ತು ತೆಲುಗು ಭಾಷೆಯಲ್ಲಿ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಬಿಡುಗಡೆ ಆಗಲಿದೆ. ಇಲ್ಲೂ ಈ ಚಿತ್ರಕ್ಕೆ 'ವಿನಯ ವಿಧೇಯ ರಾಮ', 'ಪೇಟಾ', 'ಕೆ.ಜಿ.ಎಫ್' ಚಿತ್ರ ಸ್ಪರ್ಧೆಯೊಡ್ಡಲಿದೆ.

More from Filmibeat

English summary
Bollywood Actor Anupam Kher starrer The Accidental Prime Minister film collects Rs.15.50 crore in 5 days and seems to be losing grip at the box office.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X