ನಟಿ-ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಇನ್ಸ್ಟಾಗ್ರಾಂ ಖಾತೆ ಹ್ಯಾಕ್

ನಟಿ-ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ನಟಿ ಬುಧವಾರ ತಿಳಿಸಿದ್ದು, ಈ ಸಂಬಂಧ ಮಹಾರಾಷ್ಟ್ರ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಫೋಟೋ, ವಿಡಿಯೋ ಹಂಚಿಕೆ ಅಪ್ಲಿಕೇಶನ್‌ನಲ್ಲಿ ಡೈರೆಕ್ಟ್ ಮೆಸೇಜ್‌ಗೆ ಪ್ರತಿಕ್ರಿಯಿಸಿದ ನಂತರ ಅಕೌಂಟ್ ಹ್ಯಾಕ್ ಆಗಿದೆ ಎಂದು ನಟಿ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಎಫ್ ಐ ಆರ್ ಸಹ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

''ಸೈಬರ್ ಅಪರಾಧಗಳನ್ನು ಮಹಿಳೆಯರು ಲಘುವಾಗಿ ತೆಗೆದುಕೊಳ್ಳಬಾರದು. ನಾನು ದೂರು ನೀಡಲು ಹೋದ ಸಂದರ್ಭದಲ್ಲಿ ಡಿಸಿಪಿ ರಶ್ಮಿ ಕರಂದಿಕರ್ ಈ ಕುರಿತು ಹೆಚ್ಚು ತಿಳುವಳಿಕೆ ನೀಡಿದರು. ಖಂಡಿತವಾಗಿಯೂ ಇದರ ಬಗ್ಗೆ ಭವಿಷ್ಯದಲ್ಲಿ ಕೆಲಸ ಮಾಡಲಾಗುತ್ತದೆ'' ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

Urmila Matondkars Instagram account hacked

ಅಂದ್ಹಾಗೆ, ಮಾತೋಂಡ್ಕರ್ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿರುವ ಪೋಸ್ಟ್‌ಗಳು ಡಿಲೀಟ್ ಆಗಿದೆ. ಅಡಿಬರಹವನ್ನು "ಇನ್‌ಸ್ಟಾಗ್ರಾಮ್ ಸಪೋರ್ಟ್" ಎಂದು ಬದಲಾಯಿಸಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಮುಂಬೈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಊರ್ಮಿಳಾ ಮಾತೋಂಡ್ಕರ್ ಇತ್ತೀಚಿಗಷ್ಟೆ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಶಿವಸೇನೆ ಭಾವುಟ ಹಿಡಿದಿದ್ದರು.

More from Filmibeat

English summary
Actress and Politician Urmila Matondkar's Instagram account hacked, she files complaint in maharashtra police.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X