Waheeda Rehman: ಖ್ಯಾತ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರಕಟಿಸಿದ್ದಾರೆ. ಸಿನಿರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

5 ದಶಕಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಅವರು 90 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಶಸ್ತಿ ಘೋಷಿಸಿರುವ ಸಚಿವ ಅನುರಾಗ್ ಠಾಕೂರ್ ಟ್ವಿಟರ್‌ನಲ್ಲಿ ನಟಿಯ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ ಜೊತೆಗೆ ವಹೀದಾ ರೆಹಮಾನ್ ಅವರ ಹಿಂದಿನ ಸಾಧನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

waheeda-rehman-honoured-with-dadasaheb-phalke-award

"ವಹೀದಾ ರೆಹಮಾನ್ ಜಿ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷವಾಗುತ್ತಿದೆ. ವಹೀದಾ ಜಿ ಹಿಂದಿ ಚಲನಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದಿದ್ದಾರೆ. ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬೀವಿ ಔರ್ ಗುಲಾಮ್, ಗೈಡ್, ಖಾಮೋಶಿ ಮತ್ತು ಹಲವಾರು ಇತರ ಸಿನಿಮಾಗಳು ಜನರ ನೆನಪಿನಲ್ಲಿ ಉಳಿಯುವಂತಹದು" ಎಂದಿದ್ದಾರೆ.

"5 ದಶಕಗಳ ಅವರ ವೃತ್ತಿಜೀವನದಲ್ಲಿ, ಅವರು ತಮ್ಮ ಪಾತ್ರಗಳನ್ನು ಅತ್ಯಂತ ಸೂಕ್ಷ್ಮವಾಗಿ ಆರಿಸಿಕೊಂಡಿದ್ದಾರೆ. ರೇಷ್ಮಾ ಮತ್ತು ಶೇರಾ ಚಿತ್ರದಲ್ಲಿನ ಪಾತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಹೀದಾ ರೆಹಮಾನ್ ಜಿ ಅವರು ತಮ್ಮ ಕಠಿಣ ಪರಿಶ್ರಮದಿಂದ ಈ ಅತ್ಯುನ್ನತ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಇದು ವೃತ್ತಿಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬಲ್ಲ ಭಾರತೀಯ ನಾರಿಯ ಸಮರ್ಪಣೆ, ಬದ್ಧತೆ ಮತ್ತು ಶಕ್ತಿಗೆ ಸಾಕ್ಷಿ" ಎಂದು ಹೇಳಿದ್ದಾರೆ.

"ಐತಿಹಾಸಿಕ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ಸಮಯದಲ್ಲಿ, ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ರತೀಯ ಚಿತ್ರರಂಗದ ಪ್ರಮುಖ ಮಹಿಳೆ ಮತ್ತು ಚಲನಚಿತ್ರಗಳಿಗೆ ತನ್ನ ಜೀವನವನ್ನು ಮುಡಿಪಾಗಿಟ್ಟ ಒಬ್ಬರಿಗೆ ನೀಡುವ ಸೂಕ್ತವಾದ ಗೌರವವಾಗಿದೆ" ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಹೆಚ್ಚಾಗಿ ಹಿಂದಿ ಸಿನಿಮಾಗಳಲ್ಲಿ ನಟಿಸಿದ ವಹೀದಾ ರೆಹಮಾನ್ ಅವರು ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆ ಆದ ಬಳಿಕ ಅವರ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅಭಿನಂದನೆ ತಿಳಿಸುತ್ತಿದ್ದಾರೆ.

waheeda-rehman-honoured-with-dadasaheb-phalke-award

ಕಳೆದ ವರ್ಷ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಹಿರಿಯ ಬಾಲಿವುಡ್ ನಟಿ ಆಶಾ ಪರೇಖ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ಅವರ ಜೀವಮಾನದ ಕೊಡುಗೆಗಾಗಿ ನೀಡಲಾಯಿತು. ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಇತರರಲ್ಲಿ ರಜನಿಕಾಂತ್, ಅಮಿತಾಬ್ ಬಚ್ಚನ್, ಗುಲ್ಜಾರ್, ಪ್ರಾಣ್, ಪೃಥ್ವಿರಾಜ್ ಕಪೂರ್, ಮನೋಜ್ ಕುಮಾರ್, ಶಶಿ ಕಪೂರ್, ಮನ್ನಾ ಡೇ, ಮತ್ತು ವಿನೋದ್ ಖನ್ನಾ (ಮರಣೋತ್ತರ) ಸೇರಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅವರನ್ನು 'ಭಾರತೀಯ ಚಿತ್ರರಂಗದ ಪಿತಾಮಹ' ಎಂದು ಕರೆಯಲಾಗುತ್ತದೆ. ಅವರು ಸುಮಾರು ಎರಡು ದಶಕಗಳ ಚಲನಚಿತ್ರ ನಿರ್ದೇಶಕರಾಗಿ ತಮ್ಮ ವೃತ್ತಿಜೀವನದಲ್ಲಿ 27 ಕಿರುಚಿತ್ರಗಳನ್ನು ಮತ್ತು 90 ಕ್ಕೂ ಹೆಚ್ಚು ಚಲನಚಿತ್ರಗಳನ್ನು ನೀಡಿದ್ದಾರೆ. ಅವರ ನಿಧನದ ಎರಡು ದಶಕಗಳ ನಂತರ, ಭಾರತ ಸರ್ಕಾರವು 1969 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳನ್ನು ಘೋಷಿಸಿದೆ.

More from Filmibeat

English summary
Veteran actor Waheeda Rehman honoured with Dadasaheb Phalke Award.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X