Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ನಿಧನ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬ ದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.
ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
Recommended Video
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.