ಬಾಲಿವುಡ್‌ನ ಹಿರಿಯ ನೃತ್ಯ ನಿರ್ದೇಶಕಿ ಸರೋಜ್ ಖಾನ್ ಆಸ್ಪತ್ರೆಗೆ ದಾಖಲು
ಬಾಲಿವುಡ್‌ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
71 ವರ್ಷದ ಸರೋಜ್ ಖಾನ್, ಅವರನ್ನು ಶನಿವಾರ ಬಾಂದ್ರಾದಲ್ಲಿರುವ ಗುರು ನಾನಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ ಆರಂಭದಲ್ಲಿಯೇ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ.
'ಸರೋಜ್ ಖಾನ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಆ ಕಾರಣದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈಗ ಅವರು ಆರಾಮಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಕೊರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಬಂದಿದೆ. ಅವರಲ್ಲಿ ಯಾವುದೇ ಲಕ್ಷಣಗಳಿಲ್ಲ. ಒಂದೆರಡು ದಿನಗಳಲ್ಲಿ ಅವರು ಬಿಡುಗಡೆಯಾಗಬಹುದು' ಎಂದು ಕುಟುಂಬದವರು ತಿಳಿಸಿದ್ದಾರೆ.

ಸುಮಾರು ನಾಲ್ಕು ದಶಕಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಅವರು, 2,000ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅವುಗಳಲ್ಲಿ ಸಾರ್ವಕಾಲಿಕ ಸೂಪರ್ ಹಿಟ್ ಗೀತೆಗಳಾದ 'ಡೋಲಾ ರೆ ಡೋಲಾ', 'ಏಕ್ ದೋ ತೀನ್', 'ಏ ಇಷ್ಕ್ ಹಾಯೆ..', 'ಚೋಲಿ ಕೆ ಪೀಚೆ ಕ್ಯಾಹೆ', 'ನಿಂಬೂಡಾ...' ಹಾಡುಗಳು ಸೇರಿವೆ. ಮೂರು ಬಾರಿ ಅವರಿಗೆ ರಾಷ್ಟ್ರ ಪ್ರಶಸ್ತಿ ದೊರಕಿದೆ.


Click it and Unblock the Notifications











