ಮಾನವ ಕಂಪ್ಯೂಟರ್ ಶಕುಂತಲಾ ದೇವಿ ಪಾತ್ರದಲ್ಲಿ ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾ ಬಾಲನ್ ವಿಭಿನ್ನ ಪಾತ್ರಗಳ ಮೂಲಕವೆ ಗುರುತಿಸಿಕೊಂಡವರು. ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ವಿದ್ಯಾ ಬಾಲನ್ ಮತ್ತೊಂದು ಇಂಟ್ರಸ್ಟಿಂಗ್ ಪ್ರಾಜೆಕ್ಟ್ ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ವಿಶೇಷ ಅಂದ್ರೆ ವಿದ್ಯಾ ಬಾಲನ್ ಮತ್ತೊಂದು ಬಯೋಪಿಕ್ ಸಿನಿಮಾ ಮಾಡುತ್ತಿದ್ದಾರೆ. ಮಾನವ ಕಂಪ್ಯೂಟರ್, ಗಣಿತಶಾಸ್ತ್ರಜ್ಞೆ ಶಕುಂತಲಾ ದೇವಿ ಪಾತ್ರದಲ್ಲಿ ವಿದ್ಯಾ ಬಾಲನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ನಟಿ ಸಿಲ್ಕ್ ಸ್ಮಿತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಡರ್ಟಿ ಪಿಕ್ಟರ್ ನಲ್ಲಿ ಮಿಂಚಿದ್ದ ವಿದ್ಯಾ ಅಭಿನಯಕ್ಕೆ ಚಿತ್ರಪ್ರಿಯರು ಫಿದಾ ಆಗಿದ್ದರು.

ಎನ್ ಟಿ ಆರ್ ಬಯೋಪಿಕ್ ನಲ್ಲಿ ಕಾಣಿಸಿಕೊಂಡಿರುವ ವಿದ್ಯಾ ಬಾಲನ್, ಈಗ ಶಕುಂತಲಾ ದೇವಿ ಬಯೋಪಿಕ್ ನಲ್ಲಿ ಅಭಿನಯಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಶಕುಂತಲಾ ದೇವಿ ಕರ್ನಾಟಕದ ಮೈಸೂರಿನವರು. ಗಣಿತಶಾಸ್ತ್ರಜ್ಞೆ, ಬರಹಗಾರ್ತಿ ಆಗಿದ್ದ ಶಕುಂತಲಾ ದೇವಿ 2013ರಲ್ಲಿ ನಿಧನರಾಗಿದ್ದಾರೆ.

Vidya Balan in Shakuntala Devi biopic

"ಭಾರತದ ಚಿಕ್ಕ ಊರಿನಲ್ಲಿ ಹುಟ್ಟಿ ವಿಶ್ವಮಟ್ಟದಲ್ಲಿ ಖ್ಯಾತಿಗಳಿಸಿದ ಶಕುಂತಲಾ ದೇವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೆಮ್ಮೆ ಎನಿಸುತ್ತೆ" ಎಂದು ವಿದ್ಯಾ ಬಾಲನ್ ಹೇಳಿಕೊಂಡಿದ್ದಾರೆ. ಅಂದ್ಹಾಗೆ ಶಕುಂತಲಾ ಬಯೋಪಿಕ್ ಗೆ ಅನು ಮೆನನ್ ಅಕ್ಷನ್ ಕಟ್ ಹೇಳುತ್ತಿದ್ದಾರೆ. ಸಧ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು ಮುಂದಿನ ವರ್ಷ ಚಿತ್ರ ತೆರೆಗೆ ಬರಲಿದೆ.

More from Filmibeat

English summary
Bollywood Actor Vidya Balan has been to play the role of math genius Shakuntala Devi in her next film. This movies is directed by Anu Menon. Set for summer 2020 release.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X