For Quick Alerts
  ALLOW NOTIFICATIONS  
  For Daily Alerts

  ಮಹೇಶ್ ಬಾಬು ಅಭಿನಯದ 'ಸರ್ಕಾರು ವಾರಿ ಪಾಟ' ಸಿನಿಮಾಗೆ ಬಾಲಿವುಡ್ ಸ್ಟಾರ್ ನಟಿ ಎಂಟ್ರಿ

  |

  ಪ್ರಿನ್ಸ್ ಮಹೇಶ್ ಬಾಬು ಅಭಿನಯದ 'ಸರ್ಕಾರು ವಾರಿ ಪಾಟ' ಸಿನಿಮಾ ಇತ್ತೀಚಿಗೆ ನಾಯಕಿಯರ ವಿಚಾರಕ್ಕೆ ಸಿಕ್ಕಾಪಟ್ಟೆ ಸದ್ದು ಮಾಡುತಿತ್ತು. ಇದೀಗ ಸಿನಿಮಾಗೆ ಮತ್ತೋರ್ವ ಖ್ಯಾತ ನಟಿ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ನಾಯಕಿಯ ವಿಚಾರವಾಗಿ ಇದುವರೆಗೂ ಸಿನಿಮಾತಂಡ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಆದರೆ ಆಗಲೇ ಮತ್ತೋರ್ವ ನಟಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದೆ.

  ಕೇವಲ ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ 'ಸರ್ಕಾರು ವಾರಿ ಪಾಟ' ಸಿನಿಮಾದಲ್ಲಿ ನಾಯಕಿಯಾಗಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಎರಡನೇ ನಾಯಕಿಯಾಗಿ ನಿವೇತಾ ನಿವೇತಾ ಥಾಮಸ್ ನಟಿಸುತ್ತಿದ್ದಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ಇದೀಗ ಬಾಲಿವುಡ್ ನ ಸ್ಟಾರ್ ನಟಿಯೊಬ್ಬರು ಮಹೇಶ್ ಬಾಬು ಜೊತೆ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

  ಮಹೇಶ್ ಬಾಬು ಸಿನಿಮಾದಲ್ಲಿ ವಿದ್ಯಾ ಬಾಲನ್

  ಮಹೇಶ್ ಬಾಬು ಸಿನಿಮಾದಲ್ಲಿ ವಿದ್ಯಾ ಬಾಲನ್

  ಬಾಲಿವುಡ್ ನ ಖ್ಯಾತ ನಟಿ ವಿದ್ಯಾ ಬಾಲನ್ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ನಟಿಸುತ್ತಿದ್ದಾರಂತೆ. ಸಿನಿಮಾದ ಪ್ರಮುಖ ಪಾತ್ರಕ್ಕೆ ವಿದ್ಯಾ ಬಾಲನ್ ಜೊತೆ ಮಾತುಕತೆ ನಡೆಸಿದೆಯಂತೆ ಸಿನಿಮಾತಂಡ. ಮೂಲಗಳ ಪ್ರಕಾರ ವಿದ್ಯಾ ಬಾಲನ್, ಮಹೇಶ್ ಬಾಬು ಸಹೋದರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

  ಅನಿಲ್ ಕಪೂರ್ ಅಭಿನಯ

  ಅನಿಲ್ ಕಪೂರ್ ಅಭಿನಯ

  ಮಹೇಶ್ ಬಾಬು ಸಿನಿಮಾದಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಇನ್ನೂ ಅಧಿಕೃತಗೊಳಿಸಿಲ್ಲ. ಆದರೆ ಅನಿಲ್ ಕಪೂರ್ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

  ಮಹೇಶ್ ಬಾಬು ಸಿನಿಮಾದಲ್ಲಿ ಕನ್ನಡ ನಟರು

  ಮಹೇಶ್ ಬಾಬು ಸಿನಿಮಾದಲ್ಲಿ ಕನ್ನಡ ನಟರು

  ಮಹೇಶ್ ಬಾಬು ಸಿನಿಮಾದಲ್ಲಿ ಕನ್ನಡ ಇಬ್ಬರು ಸ್ಟಾರ್ ನಟರಲ್ಲಿ ಒಬ್ಬರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ರಿಯಲ್ ಸ್ಟಾರ್ ಉಪೇಂದ್ರ ಮತ್ತು ಸುದೀಪ್ ಹೆಸರು ಕೇಳಿ ಬರುತ್ತಿದೆ. ಹೇಳಲಾಗುತ್ತಿದೆ. ಮಹೇಶ್ ಬಾಬುಗೆ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಉಪೇಂದ್ರ ಆಗಲಿ ಅಥವಾ ಸುದೀಪ್ ಈ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ.

  ಇದು ಕನ್ನಡದ ಹೆಣ್ಣು ಮಗಳ ಹೃದಯ | Pranitha | Filmibeat Kannada
  ಮಹೇಶ್ ಬಾಬುಗೆ ಕೀರ್ತಿ ಸುರೇಶ್ ನಾಯಕಿ

  ಮಹೇಶ್ ಬಾಬುಗೆ ಕೀರ್ತಿ ಸುರೇಶ್ ನಾಯಕಿ

  ಮಹೇಶ್ ಬಾಬು ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ಮಿಂಚುವುದು ಬಹುತೇಕ ಖಚಿತವಾಗಿದೆ. ಮೊದಲ ಬಾರಿಗೆ ಕೀರ್ತಿ ಸುರೇಶ್ ಮಹೇಶ್ ಬಾಬು ಜೊತೆ ಅಭಿನಯಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಕೀರ್ತಿ ಈಗ ಮಹೇಶ್ ಬಾಬುಗೆ ನಾಯಕಿಯಾಗುವ ಮೂಲಕ ಗ್ಲಾಮರ್ ಪಾತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ.

  English summary
  Bollywood Actress Vidya Balan playing important role in Mahesh babu's Sarkaru Vaari Paata movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X