ಐಶ್ವರ್ಯ ರೈ ಮತ್ತು ಕುಟುಂಬ ಬೇಗ ಗುಣಮುಖರಾಗುವಂತೆ ನಟ ವಿವೇಕ್ ಒಬೆರಾಯ್ ಪ್ರಾರ್ಥನೆ

ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಕುಟುಂಬಕ್ಕೂ ಸೋಂಕು ತುಗುಲಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅಮಿತಾಬ್ ಬಚ್ಚನ್ ಪುತ್ರ ಅಭಿಷೇಕ್ ಸೊಸೆ ಐಶ್ವರ್ಯ ರೈ ಮತ್ತು ಮೊಮ್ಮಗಳು ಆರಾದ್ಯ ಬಚ್ಚನ್ ಗೆ ಕೊರೊನಾ ಪಾಸಿಟಿವ್ ಬಂದಿದೆ.

Recommended Video

ಅಂದು ನನ್ನ ಅಮ್ಮನ ಕಾಲಿಗೆ ಬಿದ್ದು ಕೊಟ್ಟ ಮಾತನ್ನ ಉಳಿಸಿಕೊಂಡರು ಶಿವಣ್ಣ | Shiva Rajkumar | Filmibeat Kannada

ಮುಂಬೈನ ನಾನಾವಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಚ್ಚನ್ ಕುಟುಂಬ ಬೇಗ ಗುಣಮುಖರಾಗುವಂತೆ ಸ್ನೇಹಿತರು, ಆಪ್ತರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ಕಾಮೆಂಟ್ ಗಳ ಸುರಿಮಳೆಯೆ ಹರಿದು ಬರುತ್ತಿದೆ. ಈ ನಡುವೆ ನಟ ಮತ್ತು ಐಶ್ವರ್ಯ ರೈ ಮಾಜಿ ಪ್ರಿಯತಮ ವಿವೇಕ್ ಒಬೆರಾಯ್, ಐಶ್ವರ್ಯ ರೈ ಮತ್ತು ಕುಟುಂಬ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿವೇಕ್ ಒಬೆರಾಯ್ "ಕುಟುಂಬದ ಯೋಗಕ್ಷೇಮ ಮತ್ತು ತ್ವರಿತ ಚೇತರಿಕೆಗಾಗಿ ನಮ್ಮ ಪ್ರಾರ್ಥನೆಗಳು" ಎಂದು ಟ್ವೀಟ್ ಮಾಡಿದ್ದಾರೆ. ವಿವೇಕ್ ಟ್ವೀಟ್ ಮಾಡುತ್ತಿದ್ದಂತೆ ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಐಶ್ವರ್ಯ ಮತ್ತು ವಿವೇಕ್ ಹಳೆ ಸಂಬಂಧದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ.

Vivek Oberoi Wishes Quick Recovery For Aishwarya Rai And Her Family

'ಗೌರವ ಎಂದಿಗೂ ಕೊನೆಗೊಳ್ಳುವುದಿಲ್ಲ. ನಿಮ್ಮ ಸಂಬಂಧ ಕೆಲಸಮಾಡದಿದ್ದರೆ ಪ್ರತ್ಯೇಕವಾಗಿ, ಆದರೆ ಪ್ರತಿಯೊಬ್ಬರನ್ನು ಗೌರವಿಸಿ' ಎಂದು ಕಾಮೆಂಟ್ ಮಾಡುತ್ತಿದ್ದಾರೆ. "ಗೋಲ್ಡನ್ ಹಾರ್ಟ್ ಮ್ಯಾನ್ ವಿವೇಕ್ ಸರ್. ಲವ್ ಯೂ" ಎಂದು ಕೆಲವರು ಹೇಳುತ್ತಿದ್ದಾರೆ. ಅನೇಕರು ವಿವೇಕ್ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

More from Filmibeat

English summary
Actor Vivek Oberoi wishes quick recovery for Aishwarya Rai and Her Family after they tested positive for corona.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X