twitter
    For Quick Alerts
    ALLOW NOTIFICATIONS  
    For Daily Alerts

    ಸುಶಾಂತ್ ಸಿಂಗ್ ಕೊಲೆಯಾದರು: ಬಿಜೆಪಿ ಸಂಸದ ಬಿಚ್ಚಿಟ್ಟ ಕಾರಣಗಳು

    By ಜೇಮ್ಸ್ ಮಾರ್ಟಿನ್
    |

    ಬಾಲಿವುಡ್ ನ ಜನಪ್ರಿಯ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಪ್ರತಿದಿನ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಬಾಲಿವುಡ್ ಸೆಲೆಬ್ರಿಟಿಗಳ ವಿಚಾರಣೆ ನಡುವೆ, ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಇಂದು ಈ ಕೇಸಿನ ಬಗ್ಗೆ ಟ್ವೀಟ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಸುಶಾಂತ್ ಸತ್ತದ್ದು ಆತ್ಮಹತ್ಯೆಯಿಂದಲ್ಲ ಇದು ಕೊಲೆ ಎಂದು ಹೇಳಲು ಕಾರಣವಾಗಬಲ್ಲ 26 ಅಂಶಗಳನ್ನು ಪಟ್ಟಿ ಮಾಡಿ ಸ್ವಾಮಿ ಎಲ್ಲರ ಮುಂದಿಟ್ಟಿದ್ದಾರೆ.

    Recommended Video

    KGF Chapter 2 : Sanjay Dutt ಪಾತ್ರಕ್ಕೆ ಪ್ರೇರಣೆ ಈ ಪಾತ್ರ | Filmibeat Kannada

    ಈ ನಡುವೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ಕೋರ್ಟ್ ತಿರಸ್ಕರಿಸಿದೆ. ಪೊಲೀಸ್ ತನಿಖೆ ಮುಂದುವರೆಸಲು ಕೋರ್ಟ್ ಸೂಚಿಸಿದೆ. ಸ್ವಾಮಿ ಕೂಡಾ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಹೇಳಿದ್ದು, ಸುಶಾಂತ್ ಕುತ್ತಿಗೆ ಗಾಯ, ಮೈಮೇಲೆ ಗಾಯದ ಗುರುತುಗಳಿವೆ ಎಂದಿದ್ದಾರೆ.

    ಇನ್ನೊಂದೆಡೆ, ಸುಶಾಂತ್ ಸಿಂಗ್ ಅವರ ತಂದೆ ಕೆಕೆ ಸಿಂಗ್ ಅವರು ಪಾಟ್ನಾದ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದು ಗೊತ್ತಿರಬೇಕಲ್ಲ, ರಿಯಾರನ್ನು ವಿಚಾರಣೆಗೊಳಪಡಿಸಲು ಮುಂಬೈಗೆ ತೆರಳಿದ ಪೊಲೀಸರಿಗೆ ಅಚ್ಚರಿ ಕಾದಿತ್ತು. ನಟಿ ರಿಯಾ ನಾಪತ್ತೆಯಾಗಿದ್ದಾರೆ. ಈ ಕೇಸ್ ಮುಂಬೈಗೆ ವರ್ಗಾಯಿಸಿ ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ.

    ಸ್ವಾಮಿ ಹೇಳಿದಂತೆ ತನಿಖೆ ಸಾಧ್ಯವೇ?

    ಸ್ವಾಮಿ ಹೇಳಿದಂತೆ ತನಿಖೆ ಸಾಧ್ಯವೇ?

    ಬಲವಂತವಾಗಿ ನೇಣು ಹಾಕಿರುವ ಸಾಧ್ಯತೆ, ಆತ್ಮಹತ್ಯೆಗೆ ಪ್ರಚೋದನೆ, ಮಾನಸಿಕ ಹಿಂಸೆ ನೀಡಿರುವ ಸಾಧ್ಯತೆ ಬಗ್ಗೆ ಮರಣೋತ್ತರ ಪರೀಕ್ಷೆ ಹಾಗೂ ವಿಸೇರಾ ವರದಿಯಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಈ ನಿಟ್ಟಿನಲ್ಲಿ ಪೊಲೀಸರು ಈಗಾಗಲೇ ಹಲವಾರು ಸೆಲೆಬ್ರಿಟಿಗಳು, ಸುಶಾಂತ್ ಆಪ್ತರನ್ನು ವಿಚಾರಣೆಗೊಳಪಡಿಸಿದ್ದಾರೆ. ಇದರಿಂದ ಸುಶಾಂತ್ ಸಾವಿನ ಕಾರಣವಂತೂ ತಿಳಿಯಲಿದೆ. ಬಲವಂತವಾಗಿ ಯಾರೂ ನೇಣು ಹಾಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ವಿಸೇರಾ ಪರೀಕ್ಷಾ ವರದಿಯಲ್ಲಿ ಏನಿದೆ?

    ವಿಸೇರಾ ಪರೀಕ್ಷಾ ವರದಿಯಲ್ಲಿ ಏನಿದೆ?

    ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ವಿಸೇರಾ ಪರೀಕ್ಷಾ ವರದಿ ಹೊರ ಬಂದಿದೆ. ಇದರಲ್ಲಿ ಯಾವುದೇ ರೀತಿ ಸಂಚು ಕಂಡು ಬಂದಿಲ್ಲ, ವಿಷಪ್ರಾಶನವಾಗಿಲ್ಲ ಎಂದು ಹೇಳಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ. ಆದರೆ, ಬಲವಂತವಾಗಿ ನೇಣು ಹಾಕಿರುವ ಸಾಧ್ಯತೆ, ಆತ್ಮಹತ್ಯೆಗೆ ಪ್ರಚೋದನೆ, ಮಾನಸಿಕ ಹಿಂಸೆ ನೀಡಿರುವ ಸಾಧ್ಯತೆ ಬಗ್ಗೆ ತನಿಖಾಧಿಕಾರಿಗಳು ಗಮನ ಹರಿಸಿದ್ದು ತನಿಖೆ ಮುಂದುವರೆದಿದೆ.

    ರಿಯಾ ಚಕ್ರವರ್ತಿ ಸುಶಾಂತ್ ನಡುವಿನ ಆರ್ಥಿಕ ವ್ಯವಹಾರ

    ರಿಯಾ ಚಕ್ರವರ್ತಿ ಸುಶಾಂತ್ ನಡುವಿನ ಆರ್ಥಿಕ ವ್ಯವಹಾರ

    ಈ ನಡುವೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಸುಶಾಂತ್ ಸಿಂಗ್ ಅವರ ತಂದೆ ಕೆಕೆ ಸಿಂಗ್ ಅವರು ಪಾಟ್ನಾದ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದಾದ ಬಳಿಕ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದು, ಮುಂಬೈ ನಿವಾಸದಲ್ಲಿ ಕಂಡು ಬಂದಿಲ್ಲ, ಪಾಟ್ನಾದ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ರಿಯಾ ಹಾಗೂ ಸುಶಾಂತ್ ನಡುವಿನ ಆರ್ಥಿಕ ವ್ಯವಹಾರದ ಬಗ್ಗೆ ಕೂಡಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಒದ್ದಾಟದ ಕುರುಹು ಅಥವಾ ಹೊರ ಭಾಗದ ಗಾಯಗಳಿಲ್ಲ

    ಒದ್ದಾಟದ ಕುರುಹು ಅಥವಾ ಹೊರ ಭಾಗದ ಗಾಯಗಳಿಲ್ಲ

    ಜೂನ್ 14ರಂದು 34 ವರ್ಷ ವಯಸ್ಸಿನ ಬಿಹಾರ ಮೂಲದ ನಟ ಸುಶಾಂತ್ ಸಿಂಗ್ ಅವರ ದೇಹವು ಬಾಂದ್ರಾದ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಕಗ್ಗಂಟಾಗಿರುವ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ವರದಿ ಮಹತ್ವ ಪಡೆದುಕೊಂಡಿತ್ತು. ಅಂತಿಮ ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಂಬೈ ಪೊಲೀಸರಿಗೆ ವೈದ್ಯರು ಸಲ್ಲಿಸಿದ್ದಾರೆ. ಇದು 'ನೇಣು ಹಾಕಿಕೊಂಡ ಕಾರಣದಿಂದ ಉಸಿರುಗಟ್ಟಿ ಸಂಭವಿಸಿದ ಸಾವು' ಎಂದೇ ಹೇಳಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅವರ ದೇಹದಲ್ಲಿ ಯಾವುದೇ ಒದ್ದಾಟದ ಕುರುಹು ಅಥವಾ ಹೊರ ಭಾಗದ ಗಾಯಗಳಿಲ್ಲ. ಅವರ ಉಗುರುಗಳು ಸಹ ಸ್ವಚ್ಛವಾಗಿವೆ. ಇದು ಸ್ಪಷ್ಟವಾಗಿ ಆತ್ಮಹತ್ಯೆಯ ಪ್ರಕರಣ. ಇದರಲ್ಲಿ ಯಾವುದೇ ಬೇರೆ ಕೈವಾಡಗಳು ಇಲ್ಲ ಎಂದು ಐವರು ತಜ್ಞ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

    English summary
    "Why I think Sushanth Singh Rajput was murdered," BJP MP Swamy tweeted along with a photograph of the document that has 26 points.
    Thursday, July 30, 2020, 17:57
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X