KD The Devil Box Office: ಫ್ಯಾನ್ಸ್ ಶೋ ಕ್ಯಾನ್ಸಲ್.. 'ಕೆಡಿ' ಮೊದಲ ದಿನದ ಬಾಕ್ಸಾಫೀಸ್ ಲೆಕ್ಕಾಚಾರ ಎಷ್ಟಾಗಬಹುದು?

ಸ್ಯಾಂಡಲ್‌ವುಡ್‌ನ ಮತ್ತೊಂದು ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ 'ಕೆಡಿ ದಿ ಡೆವಿಲ್' ಬಿಡುಗಡೆಗೆ ಇನ್ನೇನು ಕ್ಷಣಗಣನೆ ಶುರುವಾಗಿದೆ. ಜೋಗಿ ಪ್ರೇಮ್ ನಿರ್ದೇಶಿಸಿದ ಈ ಸಿನಿಮಾವನ್ನು ಕಣ್ತುಂಬಿಕೊಳ್ಳುವುದಕ್ಕೆ ಸಿನಿಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾ ಮೂರು ವರ್ಷಗಳ ಬಳಿಕ ರಿಲೀಸ್ ಆಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿರುವ ಈ ಬಿಗ್ ಬಜೆಟ್ ಸಿನಿಮಾ ಮೇಲೆ ಎಲ್ಲರ ಕಣ್ಣು ಇದೆ.

'ಕೆಡಿ ದಿ ಡೆವಿಲ್' ಈ ವರ್ಷ ರಿಲೀಸ್ ಆಗುತ್ತಿರುವ ಕನ್ನಡದ ಮೊದಲ ಬಿಗ್ ಬಜೆಟ್ ಸಿನಿಮಾ. ಹಾಗಂತ ಕೇವಲ ಬಜೆಟ್ ಅಷ್ಟೇ ಅಲ್ಲ, ಸ್ಟಾರ್ ಕಾಸ್ಟ್ ಕೂಡ ದೊಡ್ಡದೇ ಇದೆ. ಧ್ರುವ ಸರ್ಜಾಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಇವರೊಂದಿಗೆ ಕ್ರೇಜಿ ಸ್ಟಾರ್‌ ರವಿಚಂದ್ರನ್, ರಮೇಶ್ ಅರವಿಂದ್, ಬಾಲಿವುಡ್ ನಟರಾದ ಸಂಜಯ್ ದತ್ ಹಾಗೂ ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Dhruva Sarja Jogi Prem Ravichandran movie KD The Devil Day 1 Box Office Prediction report

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ಮೇಲೆ ಎಲ್ಲರ ಕಣ್ಣಿದೆ. ಅದರಲ್ಲೂ ಮೊದಲ ದಿನ ಬಾಕ್ಸಾಫೀಸ್‌ನಲ್ಲಿ ಎಷ್ಟು ಕಲೆಕ್ಷನ್ ಮಾಡಬಹುದು? ಅನ್ನೋ ಬಗ್ಗೆ ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕಾಚಾರ ಹಾಕುವುದಕ್ಕೆ ಈಗಾಗಲೇ ಶುರು ಮಾಡಿದ್ದಾರೆ. ಹಾಗಿದ್ದರೆ, ಫ್ಯಾನ್ಸ್ ಶೋ ರದ್ದಾದ ಬಳಿಕ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು? ತಿಳಿಯುವುದಕ್ಕೆ ಮುಂದೆ ಓದಿ.

'ಕೆಡಿ' ಫ್ಯಾನ್ಸ್ ಶೋ ರದ್ದು?

ಕನ್ನಡದ ಬಿಗ್ ಬಜೆಟ್ ಸಿನಿಮಾ 'ಕೆಡಿ ದಿ ಡೆವಿಲ್' ಫ್ಯಾನ್ಸ್ ರದ್ದಾಗಿದೆ. ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಇಡಲಾಗಿತ್ತು. ಕೆಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಈ ಸಿನಿಮಾದ ಫ್ಯಾನ್ಸ್ ಶೋ ಓಪನ್ ಆಗಿತ್ತು. ಇನ್ನು ಕೆಲವು ಸ್ಕ್ರೀನ್‌ಗಳಲ್ಲಿ 6.30ಕ್ಕೆ ಫ್ಯಾನ್ಸ್ ಶೋ ಅರೇಂಜ್ ಆಗಿತ್ತು. ಆದರೆ, ಈ ಶೋಗಳು ರದ್ದಾಗಿದ್ದರಿಂದ ಮೊದಲ ದಿನದ ಬಾಕ್ಸಾಫೀಸ್‌ ಕಲೆಕ್ಷನ್ ಮೇಲೆ ಪರಿಣಾಮ ಬೀರಿದೆ ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಹಾಕುತ್ತಿದ್ದಾರೆ.

ಕರ್ನಾಟಕದಲ್ಲಿ 'ಕೆಡಿ' ಶೋ ಎಷ್ಟು?

'ಕೆಡಿ' ಆರಂಭದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಅಂತ ಅನೌನ್ಸ್ ಆಗಿತ್ತು. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ತಂಡ ಹೇಳಿತ್ತು. ಆದ್ರೀಗ ರಿಲೀಸ್‌ ಸ್ಟ್ರಾಟಜಿಯನ್ನು ಕೊಂಚ ಮಟ್ಟಿಗೆ ಬದಲಾವಣೆ ಮಾಡಿಕೊಂಡಿದೆ. ಮೊದಲು ಕನ್ನಡದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ ನಿರ್ಧರಿಸಿದೆ. ಆ ನಂತರ ಉಳಿದ ಭಾಷೆಗಳಲ್ಲಿ ರಿಲೀಸ್ ಮಾಡಲು ಚಿಂತಿಸಿದೆ. ಹೀಗಾಗಿ ಕರ್ನಾಟಕದಲ್ಲಿ ಸುಮಾರು 430 ರಿಂದ 460 ಸ್ಕ್ರೀನ್‌ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 1700 ರಿಂದ 1800 ಶೋಗಳು ಮೊದಲ ದಿನ ಪ್ರದರ್ಶನ ಕಾಣಲಿದೆ.

Dhruva Sarja Jogi Prem Ravichandran movie KD The Devil Day 1 Box Office Prediction report

ಮೊದಲ ದಿನ ಕಲೆಕ್ಷನ್ ಲೆಕ್ಕಾಚಾರವೇನು?

ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್, ರೀಷ್ಮಾ ನಾಣಯ್ಯ ಅಂತಹ ಸ್ಟಾರ್‌ ಕಾಸ್ಟ್ ಇರೋದ್ರಿಂದ ಒಳ್ಳೆಯ ಓಪನಿಂಗ್ ಪಡೆದುಕೊಳ್ಳುತ್ತೆ ಎಂದು ನಿರೀಕ್ಷೆ ಮಾಡಲಾಗಿದೆ. ಕರ್ನಾಟಕದ ವಿತರಕರ ವಲಯದಲ್ಲಿ ಈಗಾಗಲೇ 'ಕೆಡಿ' ಮೊದಲ ದಿನದ ಕಲೆಕ್ಷನ್ ಬಗ್ಗೆ ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ಅಂದಾಜು 8 ರಿಂದ 10 ಕೋಟಿ ರೂಪಾಯಿವರೆಗೂ ಆಗಬಹುದೆಂದು ನಿರೀಕ್ಷೆ ಮಾಡಲಾಗಿದೆ.

'ಕೆಡಿ' ಭವಿಷ್ಯವೇನು?

ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಸಿನಿಮಾ ಮೇಲೆ ಕನ್ನಡಿಗರಿಗಂತೂ ಕುತೂಹಲವಿದೆ. ಅಲ್ಲದೇ ಸಿನಿಮಾ ಪ್ರೇಮಿಗಳು ದೊಡ್ಡ ಸ್ಟಾರ್ ಕಾಸ್ಟ್ ಅನ್ನು ನೋಡುವುದಕ್ಕೆ ಥಿಯೇಟರ್‌ಗೆ ನುಗ್ಗುವ ಸಾಧ್ಯತೆಯಿದೆ. ಒಂದು ವೇಳೆ ಸಿನಿಮಾ ಇಷ್ಟ ಆದರೆ, ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಯಾಗಬಹುದು. ಬ್ಯಾಕ್ ಟು ಬ್ಯಾಕ್ ರಜೆ ಇರುವುದರಿಂದ ಸಿನಿಮಾ ನಾಲ್ಕು ದಿನಗಳಲ್ಲಿ 30 ರಿಂದ 40 ಕೋಟಿ ರೂಪಾಯಿ ಕಲೆಕ್ಷನ್ ಮಾಡಬಹುದು ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳ ಲೆಕ್ಕಾಚಾರ.

English summary
Dhruva Sarja Jogi Prem, Ravichandran movie KD The Devil Day 1 Box Office Prediction report.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X