Landlord Boxoffice Day 15: ಎರಡು ವಾರಕ್ಕೆ 'ಲ್ಯಾಂಡ್‌ಲಾರ್ಡ್' ಕಲೆಕ್ಷನ್ ಎಷ್ಟು? ಮುಂದೇನು?

ಜಡೇಶ್ ಹಂಪಿ ನಿರ್ದೇಶನದಲ್ಲಿ ದುನಿಯಾ ವಿಜಯ್ ನಟನೆಯ 'ಲ್ಯಾಂಡ್‌ಲಾರ್ಡ್' ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆದಿದೆ. ಎ ವಾರ ಪೂರೈಸಿ ಸಿನಿಮಾ 3ನೇ ವಾರಕ್ಕೆ ಕಾಲಿಟ್ಟಿದೆ. ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದ್ದ ಸಿನಿಮಾ ಗಣ್ಯರ ಮೆಚ್ಚುಗೆ ಪಡೆದಿದೆ. ಸರ್ಕಾರದಿಂದ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೂಡ ಸಿಕ್ಕಿದೆ.

ಜನವರಿ 23ರಂದು 'ಲ್ಯಾಂಡ್‌ಲಾರ್ಡ್' ಸಿನಿಮಾ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಜೊತೆಗೆ ರಚಿತಾ ರಾಮ್, ರಾಜ್‌. ಬಿ ಶೆಟ್ಟಿ, ಉಮಾಶ್ರೀ ಅದ್ಭುತ ನಟನೆ ಚಿತ್ರಕ್ಕೆ ಹೆಚ್ಚಿನ ಬಲ ತುಂಬಿತ್ತು. ಒಂದು ಸದಭಿರುಚಿಯ ಸಿನಿಮಾ ಎನಿಸಿಕೊಂಡು ಪ್ರೇಕ್ಷಕರ ಮನಗೆದ್ದಿತ್ತು. ಸಿನಿಮಾ ನೋಡಿದವರೆಲ್ಲಾ ಮೆಚ್ಚಿ ಸೋಶಿಯಲ್ ಮೀಡಿಯಾದಲ್ಲಿ ಬರೆದರು. ಹಾಗಾಗಿ ಸಾಕಷ್ಟು ಜನ ಸಿನಿಮಾ ನೋಡಲು ಮನಸ್ಸು ಮಾಡಿದರು.

Duniya Vijay s Landlord Enters 3rd Week Strong with Tax Exemption and Steady Box Office Run

ಸಿನಿಮಾ ಬಿಡುಗಡೆ ಬಳಿಕ ಚಿತ್ರತಂಡ ಭರ್ಜರಿ ಪ್ರಚಾರ ಮಾಡಿತ್ತು. ಅದು ಕೂಡ ಚಿತ್ರಕ್ಕೆ ಪ್ರೇಕ್ಷಕರನ್ನು ಸೆಳೆಯಲು ಸಹಕಾರಿಯಾಗಿತ್ತು. ಆದರೂ ದೊಡ್ಡಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರನ್ನು ಸೆಳೆಯಲಿಲ್ಲ. ಇಷ್ಟು ಒಳ್ಳೆ ಚಿತ್ರವನ್ನು ನಿರೀಕ್ಷಿತ ಮಟ್ಟದಲ್ಲಿ ಬಂದು ಪ್ರೇಕ್ಷಕರು ನೋಡಲಿಲ್ಲ ಎನ್ನುವುದು ಬೇಸರದ ಸಂಗತಿ. ಆದರೂ ಸಿನಿಮಾ ಗೆಲುವಿನ ಓಟ ಮುಂದುವರೆದಿದೆ.

3ನೇ ವಾರಕ್ಕೆ ಬೆಂಗಳೂರಿನಲ್ಲಿ 40ಕ್ಕೂ ಅಧಿಕ ಶೋಗಳಲ್ಲಿ ಸಿನಿಮಾ ಪ್ರದರ್ಶನವಾಗುತ್ತಿದೆ. ಮೈಸೂರಿನಲ್ಲಿ 12 ಶೋಗಳಲ್ಲಿ ಸಿನಿಮಾ ಪ್ರದರ್ಶನ ಮುಂದುವರೆಸಿದೆ. ಕಥೆ- ಚಿತ್ರಕಥೆ, ಕಲಾವಿದರ ನಟನೆ, ಛಾಯಾಗ್ರಹಣ, ಸಂಭಾಷಣೆ, ನಿರ್ದೇಶಕ ಹೀಗೆ ಎಲ್ಲಾ ವಿಭಾಗಗಳಲ್ಲಿ ಬೆಸ್ಟ್ ಎನಿಸಿಕೊಂಡಿರುವ 'ಲ್ಯಾಂಡ್‌ಲಾರ್ಡ್' ಸಿನಿಮಾ 15 ದಿನ ಪೂರೈಸಿ ಮುಂದುವರೆದಿದೆ.

15 ದಿನಗಳ ಕಲೆಕ್ಷನ್

ಆರಂಭದಲ್ಲಿ ಕೆಲ ಶೋಗಳು ಹೌಸ್‌ಫುಲ್ ಆಗಿತ್ತು. ಇನ್ನುಳಿದಂತೆ ದೊಡ್ಡಮಟ್ಟದಲ್ಲಿ ಪ್ರೇಕ್ಷಕರ ರೆಸ್ಪಾನ್ಸ್ ಸಿಕ್ಕಿರಲಿಲ್ಲ. 15 ದಿನಕ್ಕೆ 7 ಕೋಟಿ ರೂ. ನೆಟ್ ಕಲೆಕ್ಷನ್ ಮಾಡಿರುವುದಾಗಿ www.sacnilk ವೆಬ್ ಸೈಟ್ ವರದಿ ಮಾಡಿದೆ. ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕ ಚಿತ್ರಕ್ಕೆ ಈ ಗಳಿಕೆ ಕಮ್ಮಿ ಎನಿಸದೇ ಇರದು.

ತೆರಿಗೆ ವಿನಾಯಿತಿ

ಉತ್ತಮ ಸಾಮಾಜಿಕ ಸಂದೇಶ ಹೊಂದಿರುವ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ದಲಿತ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ "ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದಿದ್ದರು.

"ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ" ಎಂದು ಬರೆದುಕೊಂಡಿದ್ದರು.

ದುನಿಯಾ ವಿಜಯ್ ಸಕ್ಸಸ್

'ಸಲಗ' ಹಾಗೂ 'ಭೀಮ' ಚಿತ್ರಗಳ ಬಳಿಕ 'ಲ್ಯಾಂಡ್‌ಲಾರ್ಡ್' ರೀತಿಯ ಸಿನಿಮಾ ಆಯ್ಕೆ ಮಾಡಿಕೊಂಡು ದುನಿಯಾ ವಿಜಯ್ ಗೆದ್ದಿದ್ದಾರೆ. ಅವರ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೆಳವರ್ಗದ ಕೂಲಿ ಕಾರ್ಮಿಕನ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಮೇಲ್ವರ್ಗದವರ ದಬ್ಬಾಳಿಕೆಗೆ ಸಿಲುಕಿ ನೋವು ಅನುಭವಿಸುವ, ಕೊನೆಗೆ ಬಂಡಾಯ ಎದ್ದು ತನ್ನವರ ಪರ ನಿಲ್ಲುವ ನಾಯಕನಾಗಿ ವಿಜಯ್ ನಟನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Disclaimer: ಈ ವರದಿಯಲ್ಲಿ ನೀಡಲಾಗಿರುವ ಸಿನಿಮಾದ ಬಾಕ್ಸ್ ಆಫೀಸ್ ಅಂಕಿ ಅಂಶಗಳ ಮಾಹಿತಿಯನ್ನು ಬೇರೆ ಮೂಲಗಳು, https://www.sacnilk.com ಹಾಗೂ ನಿರ್ಮಾಣ ಸಂಸ್ಥೆಗಳು ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಹಲವು ವೇದಿಕೆಗಳಿಂದ ತೆಗೆದುಕೊಳ್ಳಲಾಗಿದೆ. ಸಿನಿಮಾಗೆ ಸಂಬಂಧಿಸಿದ ಬಾಕ್ಸ್ ಆಫೀಸ್ ಕಲೆಕ್ಷನ್‌ಗಳ ಕುರಿತು ಪ್ರಕಟಿಸುವ ವರದಿಗಳಿಗೆ ಫಿಲ್ಮಿಬೀಟ್ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.

More from Filmibeat

Read more about: vijay rachita ram
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X