Maa Box Office Day 1 ; ಎಲ್ಲರ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕಾಜೋಲ್, ಮೊದಲ ದಿನ 'ಮಾ' ಚಿತ್ರ ಗಳಿಸಿದ್ದೆಷ್ಟು ?
ಪುರುಷ ಪ್ರಧಾನ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಬರುವುದು ತುಂಬಾನೇ ಕಡಿಮೆ. ನಾಯಕಿಯ ಸುತ್ತ ಕಥೆ ಸುತ್ತಿದರೆ ಪ್ರೇಕ್ಷಕರ ತಲೆ ಸುತ್ತಿ ಬರುತ್ತೆ ಎನ್ನುವ ಹಲವರ ನಂಬಿಕೆಯೇ ಇದಕ್ಕೆ ಮೂಲ ಕಾರಣ. ಹೀಗಾಗಿಯೇ ಹಲವರು ನಾಯಕಿಯರು ಅಂದರೆ ಕೇವಲ ಮರ ಸುತ್ತಲು, ಚಿತ್ರದ ಗ್ಲ್ಯಾಮರ್ ಹೆಚ್ಚಿಸಲು ಅಷ್ಟೇ ಲಾಯಕ್ಕು ಎಂದುಕೊಂಡಿದ್ದಾರೆ. ಆದರೆ.. ಇವರ ಈ ಮಾತುಗಳನ್ನು..
ನಂಬಿಕೆಯನ್ನ .. ಅವಕಾಶ ಸಿಕ್ಕಾಗ ಹಲವರು ಇಲ್ಲಿಯವರೆಗೆ ಸುಳ್ಳಾಗಿಸಿದ್ದಾರೆ. ಮಹಿಳಾ ಪ್ರಧಾನ ಚಿತ್ರಗಳಲ್ಲಿ ಮಿಂಚಿದ್ದಾರೆ. ಉದಾಹರಣೆಗೆ ಕಾಜೋಲ್. ಹೌದು, ಕಾಜೋಲ್.. ಬಾಲಿವುಡ್‌ನ ಕೃಷ್ಣ ಸುಂದರಿ.

ಕಳೆದ 33 ವರ್ಷಗಳಿಂದ ತಮ್ಮ ಅಭಿನಯದಿಂದ ಅನೇಕರ ಹೃದಯ ಗೆಲ್ಲುತ್ತಾನೇ ಬಂದ ಕಾಜೋಲ್, ಅಜಯ್ ದೇವಗನ್ ಜೊತೆ ಮದುವೆಯಾದ ನಂತರ ಬಣ್ಣದ ಪ್ರಪಂಚದಿಂದ ಅಂತರ ಕಾಪಾಡಿಕೊಂಡಿದ್ದರು. ಮನೆ-ಮಕ್ಕಳು-ಗಂಡ ಎಂದು ಬ್ಯುಸಿಯಾಗಿದ್ದರು.
ಇದರ ನಡುವೆ ಅಲ್ಲೊಂದು.. ಇಲ್ಲೊಂದು.. ಚಿತ್ರಗಳಲ್ಲಿ ಕಾಣಿಸಿಕೊಂಡ ಕಾಜೋಲ್ ಮದುವೆಯ ನಂತರ ಅತೀ ಹೆಚ್ಚು ಕಾಣಿಸಿಕೊಂಡಿದ್ದು ಮಹಿಳಾ ಪ್ರಧಾನ ಚಿತ್ರಗಳಲ್ಲಿಯೇ. ಉದಾಹರಣೆಗೆ ಹೆಲಿಕಾಪ್ಟರ್ ಈಲಾ.. ತ್ರಿಭಂಗಾ.. ಸಲಾಂ ವೆಂಕಿ.. ದೋ ಪತ್ತಿ.
ಇಂಥಾ ಕಾಜೋಲ್ ಸದ್ಯ 'ಮಾ' ಎಂಬ ಚಿತ್ರದಲ್ಲಿ ಅಭಿನಯಿಸಿದ್ದು ನಿನ್ನೆ { ಜೂನ್ 27 } ತೆರೆಗೆ ಬಂದ ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್ ಪಂಡಿತರ ನಿರೀಕ್ಷೆಯನ್ನು ಮೀರಿ ಚಿತ್ರ ಮೊದಲ ದಿನ ಹಣ ಗಳಿಸಿದೆ.
ಹೌದು, ಅಸಲಿಗೆ ಸದ್ಯ ಸಿತಾರೆ ಜಮೀನ್ ಪರ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಮತ್ತೊಂದು ಕಡೆ ಅಕ್ಷಯ್ ಕುಮಾರ್ ಅಭಿನಯದ ಹೌಸ್‌ಫುಲ್ 5 ಕೂಡ ಇನ್ನೂ ಕೆಲವು ಚಿತ್ರಮಂದಿರಗಳಲ್ಲಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಇದು ಮಾಸ್ ಯುಗ. ಬಾಲಿವುಡ್‌ನ ದೊಡ್ಡ ದೊಡ್ಡ ಸೂಪರ್ ಸ್ಟಾರ್‌ಗಳ ಚಿತ್ರಗಳೇ ಬಾಕ್ಸಾಫೀಸ್‌ನಲ್ಲಿ ಜಾದೂ ಮಾಡುವಲ್ಲಿ ವಿಫಲವಾಗುತ್ತಿವೆ. ಅಂತಹದ್ದರಲ್ಲಿ ಮಹಿಳಾ ಪ್ರಧಾನ ಚಿತ್ರ ನೋಡಲು ಯಾರು ತಾನೇ ಚಿತ್ರಮಂದಿರಕ್ಕೆ ಬರುತ್ತಾರೆ, ಕಾಜೋಲ್ ಚಿತ್ರಕ್ಕೆ ಯಾರು ಕ್ಯಾರೇ ಎನ್ನುತ್ತಾರೆ ಎಂದೇ ಎಲ್ಲರು ಅಂದುಕೊಂಡಿದ್ದರು. ಇದಕ್ಕೆ ಕೈಗನ್ನಡಿ ಎಂಬಂತೆ ಚಿತ್ರಕ್ಕೆ ಹೆಚ್ಚಿನ ಸ್ಕ್ರೀನ್‌ಗಳನ್ನು ಕೂಡ ನೀಡಿಲ್ಲ. ಭಾರತದೆಲ್ಲೆಡೆ ಈ ಚಿತ್ರ ತೆರೆಗೆ ಬಂದಿದ್ದು ಕೇವಲ 1500 ಸ್ಕ್ರೀನ್‌ಗಳಲ್ಲಿ ಮಾತ್ರ.
ಆದರೂ ಕೂಡ ಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರಗಳ ಗಳಿಕೆಯ ಅಂಕಿ ಅಂಶಗಳನ್ನು ಹಂಚಿಕೊಳ್ಳುವ ಸ್ಯಾಕ್ನಿಲ್ ವೆಬ್ ಸೈಟ್ ಪ್ರಕಾರ ,ಮಾ ಚಿತ್ರ ಮೊದಲ ದಿನ { ಜೂನ್ 27 } ಬಾಕ್ಸಾಫೀಸ್‌ನಲ್ಲಿ ₹ 4.65 ಕೋಟಿಯನ್ನು ಗಳಿಸಿದೆ.
ಇನ್ನು ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ ಚಿತ್ರ ಮೊದಲ ದಿನ ₹ 4.25 ರಿಂದ ₹ 4.75 ಕೋಟಿ ಹಣವನ್ನು ಗಳಿಸಿದ್ದು ಇಂದು ಮತ್ತು ನಾಳೆ ಚಿತ್ರದ ಗಳಿಕೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಮಾ ಚಿತ್ರಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ ಎಂದು ಕೂಡ ಬಾಲಿವುಡ್ ಹಂಗಾಮ ವರದಿಯಲ್ಲಿ ಉಲ್ಲೇಖಿಸಿದೆ.
Disclaimer: ಈ ವರದಿಯಲ್ಲಿ ನೀಡಲಾಗಿರುವ ಸಿನಿಮಾದ ಬಾಕ್ಸ್ ಆಫೀಸ್ ಅಂಕಿ ಅಂಶಗಳ ಮಾಹಿತಿಯನ್ನು https://www.sacnilk.com/, https://x.com/taran_adarsh, https://x.com/rameshlaus?lang=en, ನಿರ್ಮಾಣ ಸಂಸ್ಥೆಗಳು ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಹಲವು ವೇದಿಕೆಗಳಿಂದ ತೆಗೆದುಕೊಳ್ಳಲಾಗಿದೆ. ಸಿನಿಮಾಗೆ ಸಂಬಂಧಿಸಿದ ಬಾಕ್ಸ್ ಆಫೀಸ್ ಕಲೆಕ್ಷನ್‌ಗಳ ಕುರಿತು ಪ್ರಕಟಿಸುವ ವರದಿಗಳಿಗೆ ಫಿಲ್ಮಿಬೀಟ್ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.


Click it and Unblock the Notifications











