Kantara Chapter 1 Box Office Day 33: ಭಾನುವಾರದ ಕಲೆಕ್ಷನ್ 5ನೇ ಸೋಮವಾರ ಇಲ್ಲ; 33ನೇ ದಿನದ ಕಲೆಕ್ಷನ್ ಎಷ್ಟು?
ವಿಶ್ವದಾದ್ಯಂತ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿದ್ದ 'ಕಾಂತಾರ ಚಾಪ್ಟರ್ 1' ಥಿಯೇಟರ್‌ನಲ್ಲಿ 34ನೇ ದಿನಕ್ಕೆ ಕಾಲಿಟ್ಟಿದೆ. ಗಲ್ಲಾಪಟ್ಟಿಯಲ್ಲಿ ಅಬ್ಬರಿಸಿದ ಬಳಿಕ ಈಗ ಓಟಿಟಿಯಲ್ಲೂ ಸದ್ದು ಮಾಡುವುದಕ್ಕೆ ಶುರು ಮಾಡಿದೆ. ಆದರೂ ಹೊಂಬಾಳೆ ಫಿಲ್ಮ್ಸ್ ಕೆಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ಪ್ರದರ್ಶನ ಮಾಡುತ್ತಿದೆ. ವೀಕೆಂಡ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದ 'ಕಾಂತಾರ 1' 5ನೇ ಸೋಮವಾರ ದೊಡ್ಡ ಮಟ್ಟದಲ್ಲಿ ಡ್ರಾಪ್ ಕಂಡಿದೆ.
'ಕಾಂತಾರ ಚಾಪ್ಟರ್ 1' 32ನೇ ದಿನ ಅಂದರೆ, ಭಾನುವಾರ ಉತ್ತಮ ಕಲೆಕ್ಷನ್ ಆಗಿತ್ತು. 5ನೇ ಶನಿವಾರ, 5ನೇ ಭಾನುವಾರ ಈ ಎರಡೂ ದಿನಗಳು ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಅನ್ನೇ ಮಾಡಿತ್ತು. ಇನ್ನು 33ನೇ ದಿನ ಅಂದರೆ, 5ನೇ ಸೋಮವಾರ ಸಿನಿಮಾದ ಕಲೆಕ್ಷನ್‌ನಲ್ಲಿ ಏರಿಕೆಯಾಗಬಹುದೆಂಬ ನಿರೀಕ್ಷೆಯಿತ್ತು. ಆದರೆ, ಟ್ರೇಡ್ ಎಕ್ಸ್‌ಪರ್ಟ್‌ಗಳ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುವಲ್ಲಿ ಹಿಂದೆ ಬಿದ್ದಿದ್ದರೂ, ಕೆಲವು ದಾಖಲೆಗಳನ್ನು ಉಡೀಸ್ ಮಾಡಿದೆ. ಕಳೆದ ಎರಡೂವರೆ ವರ್ಷಗಳಿಂದ ಸೈಲೆಂಟ್ ಆಗಿದ್ದ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ಸಿಕ್ಕಂತಾಗಿದೆ. ಹಾಗಿದ್ದರೆ, 5ನೇ ಸೋಮವಾರ 'ಕಾಂತಾರ ಚಾಪ್ಟರ್ 1' ಮಾಡಿದ ಕಲೆಕ್ಷನ್ ಎಷ್ಟು? 32ನೇ ದಿನಕ್ಕೂ 33ನೇ ಎಷ್ಟು ಕೋಟಿ ಅಂತರವಿದೆ? ತಿಳಿಯುವುದಕ್ಕೆ ಮುಂದೆ ಓದಿ.
33ನೇ ದಿನದ ಕಲೆಕ್ಷನ್ ಎಷ್ಟು?
'ಕಾಂತಾರ ಚಾಪ್ಟರ್ 1' 33ನೇ ದಿನ ಕೋಟಿಗಿಂತ ಕಡಿಮೆ ಕಲೆಕ್ಷನ್ ಮಾಡಿದೆ. ಇಲ್ಲಿವರೆಗೂ ಪ್ರತಿದಿನ ಕೋಟಿ ಲೆಕ್ಕದಲ್ಲಿಯೇ ಈ ಸಿನಿಮಾ ಕಲೆಕ್ಷನ್ ಮಾಡಿತ್ತು. ಆದರೆ, ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಲೆಕ್ಕದಲ್ಲಿ ಕಲೆಕ್ಷನ್ ಮಾಡಿದೆ. ಸ್ಯಾಕ್ನಿಲ್ಕ್ ವರದಿ ಪ್ರಕಾರ, ಹೊಂಬಾಳೆ ಫಿಲ್ಮ್ಸ್ 33ನೇ ದಿನ ಕೇವಲ 74 ಲಕ್ಷ ರೂಪಾಯಿಗಳನ್ನಷ್ಟೇ ಕಲೆಕ್ಷನ್ ಮಾಡಿದೆ. ಈ ಮೂಲಕ ಭಾರತದಾದ್ಯಂತ ಈ ಸಿನಿಮಾದ ಕಲೆಕ್ಷನ್ ₹611.54 ಕೋಟಿ (Net) ಗಳಿಸಿದೆ.

ವಿಶ್ವದಾದ್ಯಂತ ಕಲೆಕ್ಷನ್ ಎಷ್ಟು?
ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಹಾಗೂ ಮಲಯಾಳಂ ನಟ ಜಯರಾಂ ಅಂತಹ ತಾರೆಯರಿಗೂ ಈ ಸಿನಿಮಾ ತುಂಬಾನೇ ಸ್ಪೆಷಲ್. ವಿಶ್ವದಾದ್ಯಂತ ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಓವರ್ ಸೀಸ್ ಮಾರ್ಕೆಟ್‌ನಿಂದಲೇ ಸುಮಾರು ₹115 ಕೋಟಿಗೂ ಅಧಿಕ ಕಲೆಕ್ಷನ್ ಆಗಿತ್ತು. ಸ್ಯಾಕ್ನಿಲ್ಕ್ ಪ್ರಕಾರ ಇಲ್ಲಿವರೆಗೂ ವಿಶ್ವದಾದ್ಯಂತ ₹838.6 ಕೋಟಿ ಕಲೆಕ್ಷನ್ ಮಾಡಿದೆ.
ಭಾರತದಲ್ಲಿನ 33 ದಿನಗಳ ಬಾಕ್ಸಾಫೀಸ್ ರಿಪೋರ್ಟ್
ಭಾರತದಾದ್ಯಂತ ಈ ಸಿನಿಮಾ ರಿಲೀಸ್ ಆಗಿತ್ತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಎಲ್ಲಾ ಭಾಷೆಗಳಲ್ಲೂ ಈ ಸಿನಿಮಾ ಮೆಚ್ಚುಗೆ ವ್ಯಕ್ತವಾಗಿತ್ತು. ಕಳೆದ 33 ದಿನಗಳಲ್ಲಿ 'ಕಾಂತಾರ ಚಾಪ್ಟರ್ 1' ಗಳಿಸಿದ ಕಲೆಕ್ಷನ್ ಹೀಗಿದೆ.
'ಕಾಂತಾರ ಚಾಪ್ಟರ್ 1' ಕಲೆಕ್ಷನ್ (ಭಾರತ)
1ನೇ ದಿನ ₹61.85 ಕೋಟಿ
2ನೇ ದಿನ ₹46 ಕೋಟಿ
3ನೇ ದಿನ ₹55 ಕೋಟಿ
4ನೇ ದಿನ ₹63 ಕೋಟಿ
5ನೇ ದಿನ ₹30.50 ಕೋಟಿ
6ನೇ ದಿನ ₹34.25 ಕೋಟಿ
7ನೇ ದಿನ ₹25.25 ಕೋಟಿ
8ನೇ ದಿನ ₹21.15 ಕೋಟಿ
9ನೇ ದಿನ ₹22.25 ಕೋಟಿ
10ನೇ ದಿನ ₹39 ಕೋಟಿ
11ನೇ ದಿನ ₹40 ಕೋಟಿ
12ನೇ ದಿನ ₹13.35 ಕೋಟಿ
13ನೇ ದಿನ ₹14.15 ಕೋಟಿ
14ನೇ ದಿನ ₹10.5 ಕೋಟಿ
15ನೇ ದಿನ ₹8.85 ಕೋಟಿ
16ನೇ ದಿನ ₹8.5 ಕೋಟಿ
17ನೇ ದಿನ ₹12.75 ಕೋಟಿ
18ನೇ ದಿನ ₹17 ಕೋಟಿ
19ನೇ ದಿನ ₹12.37 ಕೋಟಿ
20ನೇ ದಿನ ₹13 ಕೋಟಿ
21ನೇ ದಿನ ₹10.25 ಕೋಟಿ
22ನೇ ದಿನ ₹6.60 ಕೋಟಿ
23ನೇ ದಿನ ₹6.1 ಕೋಟಿ
24ನೇ ದಿನ ₹9 ಕೋಟಿ
25ನೇ ದಿನ ₹10.4 ಕೋಟಿ
26ನೇ ದಿನ ₹3.25 ಕೋಟಿ
27ನೇ ದಿನ ₹3.65 ಕೋಟಿ
28ನೇ ದಿನ ₹2.50 ಕೋಟಿ
29ನೇ ದಿನ ₹2.4 ಕೋಟಿ
30ನೇ ದಿನ ₹1.75 ಕೋಟಿ
31ನೇ ದಿನ ₹3.6 ಕೋಟಿ
32ನೇ ದಿನ ₹3.65 ಕೋಟಿ
33ನೇ ದಿನ ₹0.74 ಕೋಟಿ
ಒಟ್ಟು ₹611.54 ಕೋಟಿ (Net)
Disclaimer: ಈ ವರದಿಯಲ್ಲಿ ನೀಡಲಾಗಿರುವ ಸಿನಿಮಾದ ಬಾಕ್ಸ್ ಆಫೀಸ್ ಅಂಕಿ ಅಂಶಗಳ ಮಾಹಿತಿಯನ್ನು ಬೇರೆ ಮೂಲಗಳು, https://www.sacnilk.com ಹಾಗೂ ನಿರ್ಮಾಣ ಸಂಸ್ಥೆಗಳು ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಹಲವು ವೇದಿಕೆಗಳಿಂದ ತೆಗೆದುಕೊಳ್ಳಲಾಗಿದೆ. ಸಿನಿಮಾಗೆ ಸಂಬಂಧಿಸಿದ ಬಾಕ್ಸ್ ಆಫೀಸ್ ಕಲೆಕ್ಷನ್‌ಗಳ ಕುರಿತು ಪ್ರಕಟಿಸುವ ವರದಿಗಳಿಗೆ ಫಿಲ್ಮಿಬೀಟ್ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.


Click it and Unblock the Notifications











