SU From So Box Office Day 38: ವೀಕೆಂಡ್‌ನಲ್ಲಿ 'ಸು ಫ್ರಮ್ ಸೋ'ನದ್ದೇ ಆಟ.. ₹120 ಕೋಟಿ ಗಡಿದಾಟಿತು ಕನ್ನಡ ಸಿನಿಮಾ
'ಸು ಫ್ರಮ್ ಸೋ' ಕನ್ನಡ ಚಿತ್ರರಂಗದ ದಿಕ್ಕು ಬದಲಿಸಿದ ಸಿನಿಮಾ. ಜುಲೈ ಕೊನೆಯ ವಾರದಲ್ಲಿ ಥಿಯೇಟರ್‌ಗೆ ಲಗ್ಗೆ ಇಟ್ಟಿದ್ದ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಇನ್ನೂ ತನ್ನ ಆಟವನ್ನು ಮುಂದುವರೆಸಿದೆ. ಅದರಲ್ಲೂ ವೀಕೆಂಡ್‌ನಲ್ಲಿ ಈ ಸಿನಿಮಾದ ಕಲೆಕ್ಷನ್‌ನಲ್ಲಿ ಏರಿಕೆಯಾಗುತ್ತಲೇ ಇದೆ. ಕಳೆದ ವೀಕೆಂಡ್ ಕೂಡ ಅಷ್ಟೇ ಕಲೆಕ್ಷನ್‌ನಲ್ಲಿ ಏರಿಕೆಯಾಗಿದ್ದು, ಸಿನಿಮಾ ಮಂದಿಯಲ್ಲಿ ಅಚ್ಚರಿ ಮೂಡಿಸಿದೆ.
ರಾಜ್ ಬಿ ಶೆಟ್ಟಿ ಹಾಗೂ ಸ್ನೇಹಿತರು ಸೇರಿ ನಿರ್ಮಾಣ ಮಾಡಿರುವ ಸಿನಿಮಾ 'ಸು ಫ್ರಮ್ ಸೋ' ಈ ಮಟ್ಟಿಗೆ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುತ್ತೆ ಅನ್ನೋದು ಊಹಿಸಿರಲಿಲ್ಲ. ಆದರೆ, ಇದು ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡುತ್ತಿದೆ. ಕನ್ನಡದಲ್ಲಿ ಈ ಸಿನಿಮಾಗೆ ಸಿಕ್ಕಿರುವ ರೆಸ್ಪಾನ್ಸ್ ನೋಡಿ ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿಯೂ ಡಬ್ ಮಾಡಿ ಬಿಡುಗಡೆ ಮಾಡಲಾಗಿತ್ತು. ಆದರೆ, ನಿರೀಕ್ಷೆ ಮಾಡಿದಷ್ಟು ಬೇರೆ ಭಾಷೆಗಳಲ್ಲಿ ಸಿನಿಮಾ ಓಡಲಿಲ್ಲ.

'ಸು ಫ್ರಮ್ ಸೋ' ಸಾಲು ಸಾಲು ಸೂಪರ್‌ಸ್ಟಾರ್‌ಗಳ ಸಿನಿಮಾಗಳೇ ಬಂದರೂ ಜಗ್ಗಿರಲಿಲ್ಲ. ಪವನ್ ಕಲ್ಯಾಣ್, ರಜನಿಕಾಂತ್ ಅಂತಹ ದಿಗ್ಗಜರ ಸಿನಿಮಾಗಳು ಪೈಪೋಟಿ ನೀಡಿದರೂ, ಕರ್ನಾಟಕದಲ್ಲಿ ಈ ಸಿನಿಮಾದ ಕಲೆಕ್ಷನ್‌ಗೆ ಏಟು ಕೊಡುವುದಕ್ಕೆ ಸಾಧ್ಯವಾಗಿರಲಿಲ್ಲ. ಅದಕ್ಕೆ ಉತ್ತಮ ಉದಾಹರಣೆ ಅಂದರೆ, 38ನೇ ದಿನವೂ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಅದ್ಭುತ ಕಲೆಕ್ಷನ್ ಅನ್ನು ಮಾಡಿದೆ. ಹಾಗಿದ್ರೆ, 38ನೇ ದಿನದ ಕಲೆಕ್ಷನ್ ಎಷ್ಟು? ₹125 ಕೋಟಿ ಕ್ಲಬ್ ಸೇರುವುದಕ್ಕೆ ಇನ್ನೆಷ್ಟು ಬೇಕು? ತಿಳಿಯುವುದಕ್ಕೆ ಮುಂದೆ ಓದಿ.
38ನೇ ದಿನದ ಕಲೆಕ್ಷನ್ ಎಷ್ಟು?
ರಾಜ್ ಬಿ ಶೆಟ್ಟಿ ನಿರ್ಮಾಣದ 'ಸು ಫ್ರಮ್ ಸೋ' ಸಿನಿಮಾ ರಿಲೀಸ್ ಆಗಿ 39ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆವರೆಗೂ (ಆಗಸ್ಟ್ 31) ಅಂದರೆ, 38 ದಿನಗಳವರೆಗೂ ಈ ಸಿನಿಮಾವನ್ನು ಬಾಕ್ಸಾಫೀಸ್‌ನಿಂದ ಅಲ್ಲಾಡಿಸುವುದಕ್ಕೆ ಸಾಧ್ಯವಾಗಲಿಲ್ಲ. ಸ್ಯಾಕ್ನಿಲ್ಕ್ ಪ್ರಕಾರ ಈ ಸಿನಿಮಾ 38ನೇ ದಿನ ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಯಿಂದ 84 ಕೋಟಿ ರೂಪಾಯಿಯಷ್ಟು ಕಲೆಕ್ಷನ್ ಮಾಡಿದೆ. ಆರನೇ ವಾರದಲ್ಲಿಯೂ ಈ ಸಿನಿಮಾ ಇಷ್ಟೊಂದು ಕಲೆಕ್ಷನ್ ಮಾಡಿದ್ದು, ಇತ್ತೀಚೆಗಿನ ದಿನಗಳಲ್ಲಿ ಇದೇ ಮೊದಲು ಎಂದು ಹೇಳಲಾಗಿದೆ.

38 ದಿನಗಳ ಒಟ್ಟು ಕಲೆಕ್ಷನ್ ಎಷ್ಟು?
ಹಾರರ್-ಕಾಮಿಡಿ ಸಿನಿಮಾ 'ಸು ಫ್ರಮ್ ಸೋ' ಬಾಕ್ಸಾಫೀಸ್‌ನಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಳೆದ 38 ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್ ತಗ್ಗಿದ್ದೇ ಇಲ್ಲ. ಅದರಲ್ಲೂ ಕರ್ನಾಟಕ ಹಾಗೂ ವಿದೇಶಗಳಲ್ಲಿ ಈ ಸಿನಿಮಾಗೆ ಒಳ್ಳೆಉ ಕಲೆಕ್ಷನ್ ಆಗಿದೆ. ಈ ಬಗ್ಗೆ ಇಡೀ ಚಿತ್ರತಂಡ ಖುಷಿಯ ಅಲೆಯಲ್ಲಿ ತೇಲಾಡುತ್ತಿದೆ. ಸ್ಯಾಕ್ನಿಲ್ಕ್ ಪ್ರಕಾರ ಈ ಸಿನಿಮಾ 38 ದಿನಗಳಲ್ಲಿ 120 ಕೋಟಿ ರೂಪಾಯಿ ಗಳಿಕೆ ಮಾಡಿದೆ.
125 ಕೋಟಿ ಕ್ಲಬ್ ಸೇರುತ್ತಾ?
'ಸು ಫ್ರಮ್ ಸೋ' 125 ಕೋಟಿ ರೂಪಾಯಿ ಕ್ಲಬ್ ಸೇರಿದರೆ ಹೊಸ ಇತಿಹಾಸವನ್ನು ನಿರ್ಮಾಣ ಮಾಡಿದಂತೆ. ಸದ್ಯ ವಿಶ್ವದಾದ್ಯಂತ ಸುಮಾರು 120 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಇನ್ನೂ 5 ಕೋಟಿ ರುಪಾಯಿ ಕಲೆಕ್ಷನ್ ಆಗಬೇಕಿದೆ. ಆದರೆ, ಆರನೇ ವಾರದಲ್ಲಿ ಈ ಸಿನಿಮಾದ ಕಲೆಕ್ಷನ್ ಹೇಗಿರುತ್ತೆ? 125 ಕೋಟಿ ರೂಪಾಯಿ ಕ್ಲಬ್ ಸೇರುತ್ತಾ? ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಭಾರತದ ಕಲೆಕ್ಷನ್- ₹90.02 ಕೋಟಿ (Net)
ಓವರ್ ಸೀಸ್ ಕಲೆಕ್ಷನ್- ₹15 ಕೋಟಿ
ವಿಶ್ವದಾದ್ಯಂತ ಕಲೆಕ್ಷನ್- 120. ಕೋಟಿ (Gross)
Disclaimer: ಈ ವರದಿಯಲ್ಲಿ ನೀಡಲಾಗಿರುವ ಸಿನಿಮಾದ ಬಾಕ್ಸ್ ಆಫೀಸ್ ಅಂಕಿ ಅಂಶಗಳ ಮಾಹಿತಿಯನ್ನು https://www.sacnilk.com ಹಾಗೂ ನಿರ್ಮಾಣ ಸಂಸ್ಥೆಗಳು ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಹಲವು ವೇದಿಕೆಗಳಿಂದ ತೆಗೆದುಕೊಳ್ಳಲಾಗಿದೆ. ಸಿನಿಮಾಗೆ ಸಂಬಂಧಿಸಿದ ಬಾಕ್ಸ್ ಆಫೀಸ್ ಕಲೆಕ್ಷನ್‌ಗಳ ಕುರಿತು ಪ್ರಕಟಿಸುವ ವರದಿಗಳಿಗೆ ಫಿಲ್ಮಿಬೀಟ್ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.


Click it and Unblock the Notifications











