ಅಜಯ್ ರಾವ್ ಕನ್ನಡ ಚಿತ್ರರಂಗದ ಜನಪ್ರಿಯ ನಟ. 1980ರ ಜನವರಿ 24ರಂದು ಹೊಸಪೇಟೆಯಲ್ಲಿ ಜನಿಸಿದ ಇವರು, ವಿದ್ಯಾಭ್ಯಾಸವನ್ನೆಲ್ಲಾ ಬೆಂಗಳೂರಿನಲ್ಲಿಯೇ ಮುಗಿಸಿದರು. 2003ರಲ್ಲಿ ಬಿಡುಗಡೆಗೊಂಡ ಎಕ್ಸ್‌ಕ್ಯೂಸ್ ಮಿ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ಎಕ್ಸ್‌ಕ್ಯೂಸ್ ಮಿ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡು ಇವರಿಗೆ ಒಳ್ಳೆ ಇಮೇಜ್ ತಂದುಕೊಡುವಲ್ಲಿ ಯಶಸ್ವಿಯಾಯಿತು. ನಂತರ 2008ರಲ್ಲಿ ತೆರೆಕಂಡಿರುವ 'ತಾಜ್ ಮಹಲ್' ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡರು.
ಬಳಿಕ ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಮ್ಯಾರೇಜ್ ಲವ್ ಸ್ಟೋರಿ, ಕೃಷ್ಣ ಲೀಲಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅಜಯ್ ಕೇವಲ ನಟನೆಯಲ್ಲದೇ ಕೆಲ ಚಿತ್ರಗಳಿಗೆ ನಿರ್ಮಾಪಕರಾಗಿಯೂ ಕನ್ನಡ ಚಿತ್ರಗದಲ್ಲಿ ಕಾರ್ಯನಿರ್ವಹಿಸಿದ್ದಾರೆ.