ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು 1993ರ ಜನವರಿ 8ರಂದು ಮೈಸೂರಿನಲ್ಲಿ ಜನಿಸಿದರು. ಇವರು ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಇವರ ತಂದೆ ಓಂಕಾರ ಗೌಡ. ಅಮೂಲ್ಯ ಚಿಕ್ಕ ವಯಸ್ಸಿನಲ್ಲಿರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ.
ಕಿರುತೆರೆ
ಅಮೂಲ್ಯ 2014ರಲ್ಲಿ ಸ್ವಾರ್ ಸುವರ್ಣ ವಾಹಿನಿಯ ಸ್ವಾತಿ ಮುತ್ತು ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ನಂತರ ಪುನರ್ ವಿವಾಹ, ಅರಮನೆ ಸೀರಿಯಲ್‌ಗಳಲ್ಲಿ ಫೋಷಕ ಪಾತ್ರದಲ್ಲಿ ಅಭಿನಯಿಸಿದರು. ಮುಂದೆ ಕಮಲಿ ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದರು.
ನಂತರ ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿಯಾದರು. ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀಗೌರಿ' ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಕಂಬ್ಯಾಕ್ ಮಾಡಿದ್ದಾರೆ.
ಬಿಗ್‌ಬಾಸ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿರೂಪಣೆಯ ಬಿಗ್‌ಬಾಸ್ ಕನ್ನಡ ಸೀಸನ್ 9ಕ್ಕೆ ಸ್ಪರ್ಧಿಯಾಗಿ ಭಾಗವಹಿಸಿದ್ದರು.