twitter
    Celebs»Amulya»Biography

    ಅಮೂಲ್ಯ ಜೀವನಚರಿತ್ರೆ

    ಅಮೂಲ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. 1993ರ ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಜನಿಸಿದರು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡ ಇವರು, ತಾಯಿ ಜಯಮ್ಮನ ಮಡಿಯಲಲ್ಲಿ ಬೆಳೆದರು. ಅಮೂಲ್ಯ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ನಲ್ಲಿ ಪದವಿ ಪಡೆದುಕೊಂಡಿದ್ದಾರೆ. ಅಮೂಲ್ಯ ಕಾಲೇಜು ದಿನಗಳಲ್ಲಿ ಸ್ಪೋರ್ಟ್ಸ್, ಭರತನಾಟ್ಯ ಹಾಗೂ ನೃತ್ಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಅಷ್ಟೇ ಅಲ್ಲದೇ, ಕರಾಟೆಯಲ್ಲಿ ಗ್ರೀನ್ ಬೆಲ್ಟ್ ಪಡೆದುಕೊಂಡಿದ್ದಾರೆ. 

    ಹೀಗೆ ಕಾಲೇಜು ದಿನಗಳಲ್ಲಿ ಕ್ರಿಯಾಶೀಲರಾಗಿದ್ದ ಅಮೂಲ್ಯ ಚಿಕ್ಕ ವಯಸ್ಸಿನಲ್ಲಿಯೇ ಕಿರುತೆರೆಯಲ್ಲಿ ಕಾಣಿಸಿಕೊಂಡರು. ನಂತರ 2001ರಲ್ಲಿ ಪರ್ವ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ನಂತ ಲಾಲಿಹಾಡು, ಮಂಡ್ಯ, ಸಜಿನಿ, ಸುಂಟರಗಾಳಿ, ಮಹಾರಾಜ, ನಮ್ಮ ಬಸವ, ಚಂದು ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದರು. ಹೀಗೆ ಬಹಳಷ್ಟು ಸಿನಿಮಾಗಳಲ್ಲಿ ಬಾಲನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ 2007ರಲ್ಲಿ ಬಿಡುಗಡೆಗೊಂಡ 'ಚೆಲುವಿನ ಚಿತ್ತಾರ' ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ನಾಯಕಿಯಾಗಿ ಕಾಣಿಸಿಕೊಂಡರು. ಈ ಚಿತ್ರ ಅಭೂತಪೂರ್ವ ಯಶಸ್ಸು ಕಂಡ ಹಿನ್ನಲೆಯಲ್ಲಿ ಅಮೂಲ್ಯ ಅವರ ಸಿನಿಜೀವನಕ್ಕೆ ಬಿಗ್‌ ಬಗ್ರೇಕ್ ಸಿಕ್ಕಿತು. 

    ಚೆಲುವಿನ ಚಿತ್ತಾರ ಸಿನಿಮಾ ಯಶಸ್ವಿ ನಂತರ ಇವರಿಗೆ ಹಲವು ಚಿತ್ರಗಳಲ್ಲಿ ನಟಿಸಲು ಅವಕಾಶಗಳು ದೊರೆತವು. ಬಳಿಕ ಚೈತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯ, ಗಜಕೇಸರಿ, ನಾನು ನನ್ನ ಕನಸು, ಕೃಷ್ಣ ರುಕ್ಕು, ಮಾಸ್ತಿಗುಡಿ ಸೇರಿದಂತೆ ಇನ್ನು ಹಲವು ಕನ್ನಡ ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡರು.

    ಮದುವೆ: ನಟಿ ಅಮೂಲ್ಯ 2017ರ ಮೇ 12ರಂದು ಆದಿಚುಂಚನಗಿರಿಯಲ್ಲಿ ಉದ್ಯಮಿ ಜಗದೀಶ್‌ ಆರ್ ಚಂದ್ರ ಅವರನ್ನು ವಿವಾಹವಾದರು. ಮದುವೆಯಾದ ಬಳಿಕ ನಟನೆಯಿಂದ ದೂರ ಉಳಿದಿರುವ ನಟಿ ಅಮೂಲ್ಯ, ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿದ್ದಾರೆ. ತಮ್ಮ ಮಕ್ಕಳಿಗೆ ಅಥರ್ವ್ ಹಾಗೂ ಆದವ್ ಅಂತ ಹೆಸರಿಟ್ಟಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X