twitter
    Celebs»Aparna»Biography

    ಅಪರ್ಣಾ ಜೀವನಚರಿತ್ರೆ

    ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.

    90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ  ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

    ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

    2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ'ಗೆ ಧ್ವನಿ ನೀಡಿದ್ದರು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X