X
ಅಪರ್ಣಾ

ಅಪರ್ಣಾ

Actress
ಜೀವನ ಚರಿತ್ರೆ :  ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಖ್ಯಾತ ನಿರೂಪಕಿ. ಅಚ್ಚ ಕನ್ನಡದ ನಿರೂಪಕಿಯಾಗಿ ಗುರುತಿಸಿಕೊಂಡಿದ್ದ ಅಪರ್ಣಾ ಮೂಲತಃ ಚಿಕ್ಕಮಗಳೂರಿನರು. ಅವರ ತಂದೆ ನಾರಾಯಣಸ್ವಾಮಿ ಸಿನಿಮಾ ಪತ್ರಕರ್ತರಾಗಿದ್ದರು.  1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರರ ಮಸಣದ ಹೂವು ಚಿತ್ರದಿಂದ ಕನ್ನಡ ಚಿತ್ರರಂಗ ಪ್ರವೇಶಿಸಿದರು.. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಸೇರಿದಂತೆ ಚಿತ್ರಗಳಲ್ಲಿ ನಟಿಸಿದರು. 90ರ ದಶಕದಲ್ಲಿ ನಟನೆಯಿಂದ ನಿರೂಪಕಿಯಾಗಿ ವೃತ್ತಿಯನ್ನು ಆರಂಭಿಸಿದರು. ಚಂದನ ವಾಹಿನಿ ಸೇರಿದಂತೆ ಹಲವು ಟಿವಿ ಕಾರ್ಯಕ್ರಮಗಳಿಗೆ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣ ನಟಿಸಿದ್ದಾರೆ. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. ಕಾಮಿಡಿಯನ್ ಆಗಿ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ಇವರು, 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರದ ಮೂಲಕ ಸಿಕ್ಕಾಪಟ್ಟೆ ಖ್ಯಾತಿ ಗಳಿಸಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ'ಗೆ ಧ್ವನಿ ನೀಡಿದ್ದರು.  ನಿಧನ: ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ನಾಲ್ಕನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು 2024ರ ಜುಲೈ 11ರಂದು ನಿಧನರಾದರು. 
ಮುಂದೆ ಓದಿ

ಅಪರ್ಣಾ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಅಪರ್ಣಾ

ಹೆಸರು ಅಪರ್ಣಾ
ಹುಟ್ಟಿದ ದಿನ 17 Oct 1957
ವಯಸ್ಸು 69
ಹುಟ್ಟಿದ ಸ್ಥಳ chikmagaluru
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಅಪರ್ಣಾ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+