ಅವಿವಾ ಬಿದ್ದಪ್ಪ ಮಾಡೆಲ್. ಇವರು ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ. ತಂದೆಯಂತೆಯೇ ಅವಿವಾ ಕೂಡ ಫ್ಯಾಷನ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಜೊತೆಗೆ ಫ್ಯಾಷನ್ ಮ್ಯಾನೇಜ್ ಮೆಂಟ್ ಕಂಪನಿಯೊಂದರ ನಿರ್ದೇಶಕಿಯೂ ಆಗಿದ್ದಾರೆ.
ಮದುವೆ: ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ 2022ರ ಡಿಸೆಂಬರ್ 11ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2023ರ ಜೂನ್ 5ರಂದು ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.