X
ಹೋಮ್ » ಸೆಲಬ್ರಿಟಿಗಳು » ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಬಿ.ಎಸ್.ಯಡಿಯೂರಪ್ಪ

Actor
ಜೀವನ ಚರಿತ್ರೆ :  ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡ. ಇವರು ಕರ್ನಾಟಕ ವಿಧಾನಸಭೆಯಲ್ಲಿ ಶಿಕಾರಿಪುರ ವಿಧಾನ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. 2008ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಎಸ್.ಬಂಗಾರಪ್ಪನವರನ್ನು ಸುಮಾರು 46 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ, ವಿಧಾನಸಭೆಯನ್ನು ಪ್ರವೇಶಿಸುವುದರ ಜೊತೆಗೆ ಬಿಜೆಪಿಗೆ ರಾಜ್ಯಾದ್ಯಂತ ರಾಜ್ಯಾದ್ಯಂತ ಜಯ ತಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.   ವೈಯಕ್ತಿಕ ಜೀವನ   ಬಿ.ಎಸ್.ಯಡಿಯೂರಪ್ಪ 1943 ಫೆಬ್ರವರಿ 27ರಂದು ಮಂಡ್ಯ ಜೆಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜೆಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ಇಡಲಾಗಿದೆ. ಯಡಿಯೂರಪ್ಪ ಅವರ ತಂದೆ ಹೆಸರು ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪ ಅವರಿಗೆ ನಾಲ್ಕು ವರ್ಷವಿರುವಾಗಲೇ ಅವರ ತಾಯಿ ವಿಧಿವಶರಾದರು. ಇವರು ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಮುಗಿಸಿದ್ದಾರೆ.   ಬಿ.ಎಸ್.ಯಡಿಯೂರಪ್ಪ  1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೇವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜಿನಾಮೆ ನೀಡಿ ಶಿಕಾರಿಪುರಕ್ಕೆ ತೆರಳಿ, ವೀರಭದ್ರ ಶಾಸ್ತ್ರಿಯವರ ಶಂಕರ ಅಕ್ಕಿ ಗಿರಣಿಯಲ್ಲಿ ಗುಮಾಸ್ತನಾಗಿ ಸೇರಿದರು. 1967ರಲ್ಲಿ ಮೈತ್ರಾದೇವಿಯವರನ್ನು ಮದುವೆಯಾದರು. ಅನಂತರ ಶಿವಮೊಗ್ಗದಲ್ಲಿ ಹಾರ್ಡ್ ವೇರ್ ಮಳಿಗೆಯನ್ನು ತೆರೆದರು. ವಿಜಯೇಂದ್ರ, ರಾಘವೇಂದ್ರ, ಅರುಣಾದೇವಿ, ಪದ್ಮಾವತಿ, ಉಮಾದೇವಿ ಯಡಿಯೂರಪ್ಪನವರ ಮಕ್ಕಳು. ೨೦೦೪ರಲ್ಲಿ ಇವರ ಪತ್ನಿ ನಿಧನರಾದರು. 
ಮುಂದೆ ಓದಿ

ಬಿ.ಎಸ್.ಯಡಿಯೂರಪ್ಪ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಹರೀಶ್ ಎಂ.ಡಿ ಹಳ್ಳಿ 03 Feb 2023

ಬಿ.ಎಸ್.ಯಡಿಯೂರಪ್ಪ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಬಿ.ಎಸ್.ಯಡಿಯೂರಪ್ಪ

ಹೆಸರು ಬಿ.ಎಸ್.ಯಡಿಯೂರಪ್ಪ
ಹುಟ್ಟಿದ ದಿನ 27 Feb 1943
ವಯಸ್ಸು 83
ಹುಟ್ಟಿದ ಸ್ಥಳ mandya
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಬಿ.ಎಸ್.ಯಡಿಯೂರಪ್ಪ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+