X
ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಜೀವನ ಚರಿತ್ರೆ

ಚೈತ್ರಾ ಕುಂದಾಪುರ ಫೈರ್ ಬ್ರ್ಯಾಂಡ್ ಭಾಷಣಗಾರ್ತಿ. ಉಡುಪಿ ಜಿಲ್ಲೆಯ ಕುಂದಾರಪುರ ತೆಕ್ಕಟ್ಟೆಯಲ್ಲಿ ಪಿಯುಸಿಯವರೆಗೆ ವ್ಯಾಸಂಗ ಮಾಡಿದ ಇವರು, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪದವೀಧರೆಯಾದ ಇವರು, ಉಡುಪಿಯ ಸ್ಪಂದನಾ ಹಾಗೂ ಮುಕ್ತ ನ್ಯೂಸ್ ಎಂಬ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು. ಜೊತೆಗೆ ಉದಯವಾಣಿ ಪತ್ರಿಕೆಯಲ್ಲೂ ಉಪಸಂಪಾದಕಿಯಾಗಿ ಕೆಲಸ ಮಾಡಿದ್ದರು. 

ಕಾಲೇಜು ದಿನಗಳಿಂದ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ. ಉಡುಪಿಯ ಅಜ್ಜರ ಕಾಡಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪತ್ರಕರ್ತೆಯಾಗಿ, ನಿರೂಪಕಿಯಾಗಿ, ಭಾಷಣಕಾರರಾಗಿ ಗಮನ ಸೆಳೆದಿರುವ ಇವರಿಗೆ, ಯುವ ಮಾಧ್ಯಮ ರತ್ನ ಪ್ರಶಸ್ತಿ ಸಿಕ್ಕಿದೆ. ಇವರು ಲೇಖಕಿ ಕೂಡ ಆಗಿದ್ದು, ಪ್ರೇಮ ಪಾಶ ಎಂಬ ಪುಸ್ತಕ ಬರೆದಿದ್ದಾರೆ. 

ವಂಚನೆ ಆರೋಪ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರನ್ನು ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿತ್ತು. 5 ಕೋಟಿ ರೂಪಾಯಿ ವಂಚನೆ ಆರೋಪದಡಿ ಬಂಧಿಸಲಾಗಿತ್ತು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಬಿಗ್‌ಬಾಸ್: ಚೈತ್ರಾ ಕುಂದಾಪುರ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ 14ನೇ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದಾರೆ.  


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+