ಚಕ್ಕೆರೆ ಪುಟ್ಟಮಾದೇಗೌಡ ಯೊಗೇಶ್ವರ್ ಅಲಿಯಾಸ್ ಸಿ.ಪಿ.ಯೋಗೇಶ್ವರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ ಮತ್ತು ರಾಜಕಾರಣಿ. ಚೆನ್ನಪಟ್ಟಣದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಪ್ರವಾಸೋದ್ಯಮ ಮತ್ತು ಪರಿಸರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇವರು 1963 ಆಗಸ್ಟ್ 23 ರಂದು ರಾಮನಗರದ ಚೆನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ವಿ.ವಿ ಪುರಂ ಕಾಲೇಜಿನಿಂದ ಬಿ.ಎಸ್ಸಿ ಪದವಿ ಪಡೆದಿದ್ದಾರೆ.
ಸ್ವತಂತ್ರ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದ ಇವರು ನಂತರ ಕಾಂಗ್ರೆಸ್, ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. `ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೂ', 'ಬದ್ರಿ', 'ಸೈನಿಕ', 'ಕಂಬಾಲಹಳ್ಳಿ' ಮುಂತಾದ ಚಿತ್ರಗಳಲ್ಲಿ ಅದ್ಭುತ ಅಭಿನಯ ನೀಡಿದ್ದಾರೆ. ನಾಯಕನಾಗುವ ಮುಂಚೆ `ರಣಧೀರ' ಮುಂತಾದ ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿದ್ದಾರೆ.