ದೇವ ದಕ್ಷಿಣ ಭಾರತ ಚಿತ್ರರಂಗದ ಪ್ರಮುಖ ಸಂಗೀತ ನಿರ್ದೇಶಕ ಮತ್ತು ಹಿನ್ನಲೆ ಗಾಯಕ. ಮುಖ್ಯವಾಗಿ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಹಲವಾರು ದಕ್ಷಿಣ ಭಾರತೀಯ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.
ಸುಮಾರು 20 ವರ್ಷಗಳಿಂದ ಸಂಗೀತ ನಿರ್ದೇಶಕರಾಗಿ 400 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಹಲವು ಚಿತ್ರಗಳಿಗೆ ಸಂಗೀತ ನೀಡಿದ್ದರೂ ಹೆಚ್ಚಾಗಿ ಸಾಹಸಸಿಂಹ ವಿಷ್ಣುವರ್ಧನರ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.