twitter
    Celebs»Gowthami Gowda»Biography

    ಗೌತಮಿ ಗೌಡ ಜೀವನಚರಿತ್ರೆ

    ಗೌತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ. ಚಿ.ಸೌ ಸಾವಿತ್ರಿ ಧಾರವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಇವರು, ನಂತರ ತಾಯವ್ವ, ಚೆಲುವಿ, ಚೆಲಿಸುವ ಮೋಡಗಳು ಸೇರಿದಂತೆ ಹಲವು ಧಾರವಾಹಿಗಳಲ್ಲಿ ನಟಿಸಿದ್ದಾರೆ. ಗೌತಮಿ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮೀ' ಧಾರವಾಹಿಯಲ್ಲಿ ಶ್ರೇಷ್ಠ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ಸೀರಿಯಲ್‌ನಿಂದ ಹೊರಬಂದಿದ್ದರು. 

    ಸಿನಿಮಾ
    ಗೌತಮಿ ಧಾರವಾಹಿ ಮಾತ್ರವಲ್ಲದೇ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಮಾತುಕತೆ, ದಿ ಪ್ಲ್ಯಾನ್, ಮಳೆ, ಜೆಸ್ಸಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾಗಳಲ್ಲಿ ಫೋಷಕ ಪಾತ್ರ ನಿರ್ವಹಿಸಿದ್ದಾರೆ.  

     ಮದುವೆ: ಇವರು 2018ರ ಆಗಸ್ಟ್ 17ರಂದು ಬೆಂಗಳೂರಿನ ಜೆಪಿ ನಗರದಲ್ಲಿರುವ ತಿರುಮಲಗಿರಿ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಜಾರ್ಜ್ ಕ್ರಿಸ್ಟಿ ಎಂಬುವವರನ್ನು ಮದುವೆಯಾದರು. ಆಗಸ್ಟ್ 18ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X