X
ಹೋಮ್ » ಸೆಲಬ್ರಿಟಿಗಳು » ಕೆ ಶಿವರಾಮ್
ಕೆ ಶಿವರಾಮ್

ಕೆ ಶಿವರಾಮ್

ಜೀವನ ಚರಿತ್ರೆ :  ಕೆ ಶಿವರಾಮ್ ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಜಕಾರಣಿ ಹಾಗೂ ಮಾಜಿ ಐಎಎಸ್ ಅಧಿಕಾರಿ. ಇವರು ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.   ಆರಂಭಿಕ ಜೀವನ  ಕೆ ಶಿವರಾಮ್ 1953ರ ಏಪ್ರಿಲ್ 6ರಂದು ರಾಮನಹಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿದ ಶಿವರಾಮ್, ನಂತರ 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.  ಸಿನಿಮಾರಂಗ  1993ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾ ಮೂಲಕ ಕೆ ಶಿವರಾಮ್ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ ೩, ಪ್ರತಿಭಟಬೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು.  ರಾಜಕೀಯ ಜೀವನ  2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾದ ಅಧ್ಯಕ್ಷರಾಗಿದ್ದರು. ಕೆ ಶಿವರಾಮ್ ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ. ನಿಧನ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆ ಶಿವರಾಮ್ 2024ರ ಫೆಬ್ರವರಿ 29ರಂದು ನಿಧನರಾದರು. 
ಮುಂದೆ ಓದಿ

ಕೆ ಶಿವರಾಮ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಕೆ ಶಿವರಾಮ್

ಹೆಸರು ಕೆ ಶಿವರಾಮ್
ಹುಟ್ಟಿದ ದಿನ 06 Apr 1953
ವಯಸ್ಸು 73
ಹುಟ್ಟಿದ ಸ್ಥಳ Ramanagar
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಕೆ ಶಿವರಾಮ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+