ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಧಾರಾವಾಹಿ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂಲತಃ ಮೈಸೂರಿನರಾದ ಕಿರಣ್ ಹುಟ್ಟಿ ಬೆಳೆದಿದ್ದೆಲ್ಲಾ ಉತ್ತರ ಭಾರತದಲ್ಲಿ. ಇ1993ರ ಜುಲೈ 05ರಂದು ಜನಿಸಿದ ಕಿರಣ್ ರಾಜ್, ಆಳ್ವಾಸ್ ಕಾಲೇಜಿನಲ್ಲಿ ಬಿಸಿಎ ಮುಗಿಸಿದ್ದಾರೆ. ಇವರ ತಂದೆ ಸುರೇಶ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವೃತ್ತಿಜೀವನ
ಕಿರಣ್ ರಾಜ್ ನಟನಾ ಜೀವನ ಹಿಂದಿ ಸೀರಿಯಲ್‌ನಿಂದ ಆರಂಭವಾಗಿದ್ದು, ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್, ಕನೆಕ್ಷನ್ ಆಫ್ ಟೀನೇಜರ್ಸ್ ಧಾರಾವಾಹಿಗಳಲ್ಲಿ ನಟಿಸಿದರು. ದೇವತಿ ಸೀರಿಯಲ್ ಮೂಲಕ ಕ್ನಡ ಕಿರುತೆರೆ ಎಂಟ್ಇಕೊಟ್ಟ ಇವರು, ಗುಂಡ್ಯಾನ್ ಹೆಂಡ್ತಿ, ಚಂದ್ರಮುಖಿ, ಕಿನ್ನರಿ, ಕನ್ನಡತಿ ಧಾರಾವಾಹಿಗಳಲ್ಲಿ ನಟಿಸಿದರು. ಕಲರ್ಸ್ ಕನ್ನಡದ ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ. ಡ್ಯಾನ್ಸ್ ಡ್ಯಾನ್ಸ್ ಹಾಗೂ ಲೈಫ್ ಸೂಪರ್ ಗುರು, ಬಿಗ್‌ಬಾಸ್ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದರು.
ಸಿನಿಮಾ
ಅಸತೋಮ ಸದ್ಗಮಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಇವರು, ಬಳಿಕ ಮಾರ್ಚ್ 22, ಜೀವ್ನಾನೇ ನಾಟ್ಕ ಸ್ವಾಮಿ, ಬಹುದ್ದೂರ್ ಗಂಡು, ಬಡ್ಡೀಸ್, ಒನ್ ವೇ, ರಾನಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗುವಿನಲ್ಲಿ ನುವ್ವೇ ನಾ ಪ್ರಾಣಂ, ವಿಕ್ರಮ್ ಗೌಡ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.