twitter
    Celebs»Leelavathi»Biography

    ಲೀಲಾವತಿ ಜೀವನಚರಿತ್ರೆ

    ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೆ ತಮಿಳು, ತೆಲಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಾಂತಾ ತುಕಾರಾಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ 'ಡಾ.ರಾಜಕುಮಾರ್ ಪ್ರಶಸ್ತಿಯನ್ನು 1999-2000 ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.

    ಬಾಲ್ಯ
    1937ರಲ್ಲಿ ನಟಿ ಲೀಲಾವತಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. ಆದರೆ, ಅವರು 6ನೇ ವಯಸ್ಸಿನಲ್ಲಿ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡರು.  

    ವೈಯಕ್ತಿಕ ಜೀವನ

    ನಾಟಕ, ರಂಗಭೂಮಿಯ ಬಗ್ಗೆ ಚಿಕ್ಕಂದಿನಿಂದಲೇ ಆಸಕ್ತಿ ಹೊಂದಿದ್ದ ನಟಿ ಲೀಲಾವತಿ ಅವರು, ಮೈಸೂರಿನಲ್ಲಿ ವೃತ್ತಿಜೀವನ ಆರಂಭಿಸಿದರು. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು. ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

    ಸಿನಿಪಯಣ 

    ನಟಿ ಲೀಲಾವತಿ ಅವರು 1949ರಲ್ಲಿ ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನ ಪ್ರವೇಶಿಸಿದರು.  ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು, ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ 'ಭಕ್ತ ಪ್ರಹ್ಲಾದ'ದಲ್ಲಿ ಕೂಡ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

    ಅವರು ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ 'ಮಾಂಗಲ್ಯ ಯೋಗ'. ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

    ಪೋಷಕ ಪಾತ್ರ 

    70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾ ಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

    ನಿಧನ: ಅನಾರೋಗ್ಯದಿಂದಾಘಿ ಹಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ನಟಿ ಲೀಲಾವತಿ ಅವರು 2023ರ ಡಿಸೆಂಬರ್ 8ರಂದು ನಿಧನರಾದರು. 

     


    ಪ್ರಶಸ್ತಿಗಳು:

    ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್-2008
    ಕನ್ನಡದ ಕಂದ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ- 2006
    ಡಾ.ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ- 1999-2000

    ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:
    ಅತ್ತ್ಯುತ್ತಮ ಪೋಷಕ ನಟಿ ಪ್ರಶಸ್ತಿ
    ಗೆಜ್ಜೆಪೂಜೆ-1960-70
    ಸಿಪಾಯಿ ರಾಮು1971-72
    ಡಾಕ್ಟರ್ ಕೃಷ್ಣ- 1989-90



     


     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X