ನಮ್ರತಾ ಗೌಡ ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಇವರು 1993 ಏಪ್ರಿಲ್ 15ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ನಮ್ರತಾ 2011ರಲ್ಲಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾದ `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದರು.
ನಂತರ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ 'ಹಿಮಾ' ಪಾತ್ರದ ಮೂಲಕ ಗಮನ ಸೆಳೆದರು. ನಂತರ ತಕಮಿಧಿತ ಡ್ಯಾನ್ಸ್ ಶೋನಲ್ಲಿ ಭಾಗವಹಿಸಿ ಟಾಪ್ 5ಗೆ ಆಯ್ಕೆಯಾಗಿದ್ದರು. ನಂತರ ನಾಗಿಣಿ 2 ಧಾರಾವಾಹಿಯ ಶಿವಾನಿ ಪಾತ್ರದ ಮೂಲಕ ಗಮನ ಸೆಳೆದರು.
ಬಿಗ್‌ಬಾಸ್: ನಮ್ರತಾ ಗೌಎ ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, ಫಿನಾಲೆ ತಲುಪುವ ಕೊನೆಯ ವಾರ ಎಲಿಮಿನೇಟ್ ಆಗಿದ್ದರು.