ಪ್ರಿಯಾಂಕಾ ಕೊಠಾರಿ (ನಿಶಾ ಕೊಠಾರಿ)ಪ್ರಮುಖವಾಗಿ ಬಾಲಿವುಡ್ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಕೆಲವು ಕನ್ನಡ,ತೆಲಗು ಚಿತ್ರಗಳಲ್ಲಿ ಕೂಡ ಅಭಿನಯಿಸಿದ್ದಾರೆ.
1983 ರಲ್ಲಿ ಕೋಲ್ಕತ್ತಾದಲ್ಲಿ ಜನಿಸಿದ ನಿಶಾ ದೆಹಲಿ ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಕಾಲೇಜ್ ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಇವರು ಹಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ತಮಿಳು ಚಿತ್ರದಲ್ಲಿ ಅಮೋಹ ಹೆಸರಿನಿಂದ ಗುರುತಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ರಾಮಗೋಪಾಲ್ ವರ್ಮಾ ಚಿತ್ರದ ಮೂಲಕ ನಟನೆ ಆರಂಭಿಸಿದರು.
ಪುನೀತ್ ರಾಜಕುಮಾರ್ ಅಭಿನಯದ `ರಾಜ್ ದಿ ಶೋ ಮ್ಯಾನ್' ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಬಾಲಿವುಡ್‌ನಲ್ಲಿ ತಮ್ಮ ಐಟೆಮ್ ಡ್ಯಾನ್ಸ್‌ಗಳಿಂದ ಪ್ರಸಿದ್ಧರಾಗಿದ್ದಾರೆ.