twitter
    Celebs»Puneeth Rajkumar»Biography

    ಪುನೀತ್ ರಾಜ್‌ಕುಮಾರ್ ಜೀವನಚರಿತ್ರೆ

    ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 43ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.


    ಬಾಲ್ಯ

    ಪುನೀತ್ ಅವರು 1975ರ ಮಾರ್ಚ್ 17ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜ್‌ಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವ ರಾಜ್‌ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು. ಇವರು ರಾಜ್ ದಂಪತಿಯ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದರು. ಪುನೀತ್ ಮತ್ತು ಸಹೋದರಿ ಪೂರ್ಣಿಮಾರನ್ನು ರಾಜ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್‌ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಹೀಗಾಗಿ, ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಯಿತು.

     


    ಸಿನಿಪಯಣ - ಬಾಲ ಕಲಾವಿದ

    ಪುನೀತ್ ಆರು ತಿಂಗಳು ಮಗುವಿದ್ದಾಗ 1976ರಲ್ಲಿ ತೆರೆಕಂಡ `ಪ್ರೇಮದ ಕಾಣಿಕೆ' ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡರು. ನಂತರ ಬಂದ ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಭಾಗ್ಯವಂತರು ಮುಂತಾದ ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದರು.


    ಭಾಗ್ಯವಂತ ಚಿತ್ರದ `ಬಾನ ದಾರಿಯಲ್ಲಿ ಸೂರ್ಯ', ಚಲಿಸುವ ಮೋಡಗಳು ಚಿತ್ರದ `ಕಾಣದಂತೆ ಮಾಯವಾದನೋ',ಯಾರಿವನು ಚಿತ್ರದ `ಕಣ್ಣಿಗೆ ಕಾಣುವ ದೇವರು' ಮುಂತಾದ ಗೀತೆಗಳನ್ನು ಹಾಡಿ ಹಿನ್ನೆಲೆ ಗಾಯಕರಾಗಿಯೂ ಪ್ರಶಂಸೆ ಪಡೆದರು. `ಚಲಿಸುವ ಮೋಡಗಳು' ಮತ್ತು `ಎರಡು ನಕ್ಷತ್ರಗಳು' ಚಿತ್ರದ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದರು.


    ಬೆಟ್ಟದ ಹೂ

    ಬಾಲಕಲಾವಿದನಾಗಿ ಪುನೀತ್ ಅಭಿನಯಿಸಿದ ಉತ್ಕೃಷ್ಟ ಚಿತ್ರ `ಬೆಟ್ಟದ ಹೂ'. 1984 ರಲ್ಲಿ ತೆರೆಕಂಡ ಎನ್ ಲಕ್ಷ್ಮಿ ನಾರಾಯಣ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಬಾಲಕ ರಾಮು ಆಗಿ ನಟಿಸಿದರು. ಶಾಲೆಗೆ ಹೋಗುವ ಬಡ ಬಾಲಕನೊಬ್ಬನ ತಳಮಳಗಳನ್ನು ಚಿತ್ರ ಚೆನ್ನಾಗಿ ಬಿಂಬಿಸಿತು. ಈ ಚಿತ್ರ ಇಂಗ್ಲೀಷ್ ಕಾದಂಬರಿ `ವಾಟ್ ದೆನ್ ರಾಮನ್' ಆಧಾರಿತವಾಗಿತ್ತು. ಈ ಚಿತ್ರದ ಅಭಿನಯಕ್ಕಾಗಿ ಪುನೀತ್‌ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು.

     

    ಓದಿ: ಫುಡ್ TO ರೋಬೋಟ್‌: ಅಪ್ಪು ಅವರ ಆಲ್ ಟೈಮ್ ಫೇವರೇಟ್ ಗಳು ಇವು..! 


    ಸಿನಿಪಯಣ - ನಾಯಕನಟ

    2002ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ `ಅಪ್ಪು' ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು. ನಂತರ ತೆರೆಗೆ ಬಂದ ಅಭಿ, ವೀರ ಕನ್ನಡಿಗ, ಮೌರ್ಯ, ಆಕಾಶ್ , ನಮ್ಮ ಬಸವ, ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡವು. 

    ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ. ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್,ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ.


    ಪುನೀತ್ ರಾಜಕುಮಾರ್ ಪಡೆದ ಪ್ರಶಸ್ತಿಗಳು

    ಪುನೀತ್ ಹಿಟ್ಸ್ & ಫ್ಲಾಪ್ಸ್ಲಿಂಕ್

    ಪುನೀತ್ ಟಾಪ್ 10 ಚಲನಚಿತ್ರಗಳುಲಿಂಕ್

    ಪುನೀತ್ ಬಾಲ್ಯನಟನಾಗಿ ನಟಿಸಿದ ಎಲ್ಲಾ ಚಿತ್ರಗಳುಲಿಂಕ್

    ಪುನೀತ್ ಟಾಪ್ 10 ಡ್ಯಾನ್ಸ್ಲಿಂಕ್

     

     

    ಗಾಯಕ - ನಿರೂಪಕ- ನಿರ್ಮಾಪಕ

    ಗಾಯಕನಾಗಿ ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್, ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸುತ್ತಾರೆ. ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ. ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷ.

     

    ಓದಿ: ಅಪ್ಪು ಹಾಗೂ ಅಣ್ಣಾವ್ರ ಕಾಂಬಿನೇಷನ್​ನಲ್ಲಿ ಬಂದ ಸಿನಿಮಾಗಳು


    ಚಿತ್ರ ನಿರ್ಮಾಪಕರಾಗಿ `ಕವುಲುದಾರಿ', `ಮಯಾಬಜಾರ್' ಎಂಬ ಚಿತ್ರಗಳನ್ನು ತಮ್ಮ ಹೋಮ್ ಬ್ಯಾನರ್‌ನಲ್ಲಿಯೇ ನಿರ್ಮಿರುವ ಪುನೀತ್ ತಮ್ಮ ಪ್ರೊಡಕ್ಷನ್  ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿಆರ್‌ಕೆ ' ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

     

    ಓದಿ: ಪುನೀತ್ ಅವರಿಂದ ನಾವು ಕಲಿಯಬೇಕಾದ ವಿಷಯಗಳು ಇವು 


    ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ `ಬೆಂಗಳೂರು ಪ್ರೀಮೀಯರ್ ಪುಟ್‌ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ.ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು.

     

    ಓದಿ:ಅಪ್ಪುಗಾಗಿ ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಿಸಿದ ಸಿನಿಮಾಗಳ ಪಟ್ಟಿ ಇಲ್ಲಿದೆ.

    ವಿವಾಹ:1999ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ಕೈಹಿಡಿದರು.ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.

    ಓದಿ:ಕನ್ನಡದ ಕಣ್ಮಣಿ ಪುನೀತ್ ರಾಜ್‌ಕುಮಾರ್ ಸದ್ದಿಲ್ಲದೆ ಮಾಡಿದ ಸಮಾಜ ಸೇವೆಗಳಿವು 

     

    ನಿಧನ: 2021 ಆಕ್ಟೋಬರ್ 29ರ ಬೆಳಗ್ಗೆ ಜಿಮ್ ಮಾಡುವಾಗ ಲಘು ಹೃದಯಾಘಾತದಿಂದ ಕುಸಿದು ಬಿದ್ದ ಪುನೀತ್, ಹತ್ತಿರದ ರಮಣಶ್ರೀ ಆಸ್ಪತ್ರೆಗೆ ದಾಖಲಾದರು. ತುರ್ತು ಚಿಕಿತ್ಸೆಯ ನಂತರ ಪುನೀತ್ ಅವರನ್ನು ವಿಕ್ರಮ್ ಆಸ್ಪತ್ರೆಯ ತೀವ್ರನಿಘಾ ಘಟಕಕ್ಕೆ ದಾಖಲಾಯಿತು. ಆದರೆ, ನಮ್ಮೆಲ್ಲರ ಒ್ರೀತಿಯ ಅಪ್ಪು ಚಿಕಿತ್ಸೆ ಫಲಕಾರಿಯಾಗದೇ 11.45ರ ಸುಮಾರಿಗೆ ನಿಧನರಾದರು. ಕನ್ನಡ ಚಿತ್ರರಂಗದ ಟಾಪ್ ನಟನೊಬ್ಬರು ತನ್ನ ಜೀವನ ಮತ್ತು ಸಿನಿಜೀವನದ ಉತ್ತುಂಗುದ ಕಾಲದಲ್ಲಿಯೇ ನಿಧನವಾಗಿದ್ದು ಕನ್ನಡ ಚಿತ್ರರಂಗದ ಪಾಲಿಗೆ ದುರ್ದೈವವೇ ಸರಿ.


    ಓದಿ: ನ್ಯಾಷನಲ್ ಅವಾರ್ಡ್ ಟು ಕರ್ನಾಟಕ ರತ್ನ: ಅಪ್ಪುಗೆ ಲಭಿಸಿರುವ ಎಲ್ಲಾ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ.

     

      

    ಪುನೀತ್ ರಾಜಕುಮಾರ್ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆ ಮತ್ತು ಸಮಾಜಮುಖಿ ಕಳಕಳಿಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ 2022 ಮಾರ್ಚ್ ತಿಂಗಳಿನಲ್ಲಿ ಮರಣೋತ್ತರ `ಡಾಕ್ಟರೇಟ್' ನೀಡಿ ಗೌರವಿಸಿತು.

     

    ಡಾ.ರಾಜಕುಮಾರ್            ಪಾರ್ವತಮ್ಮ ರಾಜಕುಮಾರ್

    ಶಿವ ರಾಜಕುಮಾರ್        ರಾಘವೇಂದ್ರ ರಾಜಕುಮಾರ್ 

     

     

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X