twitter
    Celebs»Ragini Dwivedi»Biography

    ರಾಗಿಣಿ ದ್ವಿವೇದಿ ಜೀವನಚರಿತ್ರೆ

    ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ರೂಪದರ್ಶಿ. 2009 ರಲ್ಲಿ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ ರಾಗಿಣಿ ಸುಮಾರು 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಕೆಲ ಹಿಂದಿ,ಮಲಯಾಳಂ.ತೆಲಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.


    ರಾಗಿಣಿ 1990 ರಲ್ಲಿ ಬೆಂಗಳೂರಿನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದರು.ಇವರ ತಂದೆ ಸೈನ್ಯದ ಜನರಲ್ ಆಗಿದ್ದರು. 2008 ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ರಾಗಿಣಿ ಹೈದಾರಾಬಾದಿನಲ್ಲಿ ಜರುಗಿದ ಫೆಮಿನಾ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ಭಾಗವಹಿಸಿ ರನ್ನರ್-ಅಪ್ ಆದರು.2009 ರಲ್ಲಿ ಮುಂಬೈನಲ್ಲಿ ಜರುಗಿದ ಫೆಮಿನಾ ಮಿಸ್ ಬ್ಯೂಟಿಪುಲ್ ಹೇರ್ ಸ್ಫರ್ಧೆ ಗೆದ್ದರು.


    ಕಿಚ್ಚ ಸುದೀಪ್‌ರ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ನಂತರ ಕನ್ನಡದ ಬಹುತೇಕ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.ಶಿವಣ್ಣ ಜೊತೆ ನಟಿಸಿದ `ಶಿವ' ಚಿತ್ರಕ್ಕೆ ಸೈಮಾ ಪ್ರಶಸ್ತಿ ಕೂಡ ಪಡೆದಿದ್ದಾರೆ.

     

    2011 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ನಂದಿನಿ ಹಾಲು ನಿಯಮಿತದ ರಾಯಭಾರಿಯಾಗಿರುವ ರಾಗಿಣಿ ನೋಂದಾಯಿತ ಅಭಿಮಾನಿಗಳ ಸಂಘವನ್ನು ಹೊಂದಿರುವ ಕನ್ನಡದ ಏಕೈಕ ನಟಿ.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X