ರಾಜೇಶ್ ಧ್ರುವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. ಶಿರಸಿಯಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದ ರಾಜೇಶ್, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ 'ಅಖಿಲ್' ಪಾತ್ರ ನಿವ್ಹಿಸುವ ಮೂಲಕ ಖ್ಯಾತಿ ಪಡೆದರು. ನಂತರ ಅರಮನೆ ಗಿಣಿ ಧಾರವಾಹಿಯಲ್ಲಿ ಅಭಿನಯಿಸಿದರು.
ಸಿನಿಮಾ
ರಾಜೇಶ್ ಧ್ರುವ 2023ರಲ್ಲಿ ತೆರೆಕಂಡ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಎಂಬ ಸಿನಿಮಾವನ್ನು ನಿರ್ದೇಶಿಸಿ, ನಾಯಕನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.